‘ನುಡಿಸಿರಿ’ಯಲ್ಲಿ ನಾಳೆ ರಾಜ್ಯಮಟ್ಟದ ದೇಹದಾರ್ಢ್ಯ ಸ್ಪರ್ಧೆ

Update: 2016-11-17 18:27 GMT

ಉಡುಪಿ, ನ.17: ಡಾ.ಎಂ. ಮೋಹನ ಆಳ್ವ ನೇತೃತ್ವದ ಅಳ್ವಾಸ್ ಎಜುಕೇಶನ್ ಸೊಸೈಟಿ ಆಶ್ರಯದಲ್ಲಿ ಕರ್ನಾಟಕ ಅಸೋಸಿಯೇಶನ್ ಆಫ್ ಬಾಡಿ ಬಿಲ್ಡರ್ಸ್‌ ಉಸ್ತುವಾರಿಯಲ್ಲಿ ದ.ಕ. ದೇಹದಾರ್ಢ್ಯಪಟುಗಳ ಸಂಘದ ಸಹಭಾಗಿತ್ವದಲ್ಲಿ ನ.19ರಂದು ಅಪರಾಹ್ನ 2 ಗಂಟೆಗೆ ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆ ‘ಮಿ.ಆಳ್ವಾಸ್ ನುಡಿಸಿರಿ-2016’ ಮೂಡುಬಿದಿರೆ ಆಳ್ವಾಸ್ ಕಾಲೇಜು ಆವರಣದಲ್ಲಿ ನಡೆಯಲಿದೆ.

ಸ್ಪರ್ಧಾಳುಗಳ ದೇಹ ತೂಕದ ಪರಿಶೀಲನೆಯು ಪೂರ್ವಾಹ್ನ 11ಕ್ಕೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News