ಆಳ್ವಾಸ್ ನುಡಿಸಿರಿಗೆ ಸಂಭ್ರಮದ ಚಾಲನೆ..!!
Update: 2016-11-18 23:52 IST
13ನೆ ‘ಆಳ್ವಾಸ್ ನುಡಿಸಿರಿ’ಯನ್ನು ಖ್ಯಾತ ಸಾಹಿತಿ ಡಾ.ಜಯಂತ್ ಕಾಯ್ಕಿಣಿ ಶುಕ್ರವಾರ ಉದ್ಘಾಟಿಸಿದರು. ಮೋಹನ್ ಆಳ್ವ, ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಡಾ. ಮನು ಬಳಿಗಾರ್, ಕರ್ನಾಟಕ ಜಾನಪದ ವಿವಿ ಕುಲಪತಿ ಡಾ.ಕೆ.ಚಿನ್ನಪ್ಪ ಗೌಡ, ಮಾಜಿ ಸಚಿವರಾದ ಕೆ.ಅಭಯಚಂದ್ರ ಜೈನ್, ಕೆ.ಅಮರನಾಥ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್, ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಕಸಾಪ ದ.ಕ. ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಮತ್ತಿತರರು ಉಪಸ್ಥಿತರಿದ್ದರು.