ಎಳೆಯ ಬಾಲಕಿಯ ಮೇಲೆ ಅತ್ಯಾಚಾರ: ಸಮುದಾಯಗಳ ನಡುವೆ ಉದ್ವಿಗ್ನ ಸ್ಥಿತಿ,ಪೊಲೀಸ್ ಕಟ್ಟೆಚ್ಚರ
Update: 2016-11-20 16:29 IST
ಮುಝಫರ್‌ನಗರ,ನ.20: ಇಲ್ಲಿಯ ಮುಜಾಹಿದ್‌ಪುರ ಗ್ರಾಮದಲ್ಲಿ ಐದರ ಹರೆಯದ ಬಾಲಕಿಯ ಮೇಲೆ ಅತ್ಯಾಚಾರ ನಡೆದ ಬಳಿಕ ಎರಡು ಸಮುದಾಯಗಳ ನಡುವೆ ತೀವ್ರ ಉದ್ವಿಗ್ನತೆ ಸೃಷ್ಟಿಯಾಗಿದ್ದು,ಪ್ರದೇಶದಲ್ಲಿ ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸ ಲಾಗಿದೆ.
ನ.18ರಂದು ಅಂಕಿತ್(20) ಎಂಬಾತ ಈ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಆಕೆಯನ್ನು ಗಂಭೀರವಾಗಿ ಗಾಯಗೊಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದರು. ಈ ಘಟನೆಯನ್ನು ವಿರೋಧಿಸಿ ಗ್ರಾಮಸ್ಥರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ತಲೆಮರೆಸಿಕೊಂಡಿರುವ ಆರೋಪಿಯನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿದ್ದರು.
ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿಯಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದು ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ನಿಗಾ ವಹಿಸಿದ್ದಾರೆ. ತನ್ಮಧ್ಯೆ ಆಸ್ಪತ್ರೆಗೆ ದಾಖಲಿಸಲ್ಪಟ್ಟಿರುವ ಬಾಲಕಿ ಇನ್ನೂ ಚಿಂತಾಜನಕ ಸ್ಥಿತಿಯಲ್ಲಿದ್ದಾಳೆ.