×
Ad

ಮೂಡ್ಲಕಟ್ಟೆ: ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Update: 2016-11-20 18:57 IST

ಕುಂದಾಪುರ, ನ.20: ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಶನಿವಾರ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ಮೋಹನದಾಸ್ ಭಟ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಭಾರತೀಯ ರೆಡ್ ಕ್ರಾಸ್ ಕುಂದಾಪುರ ವಲಯ ಅಧ್ಯಕ್ಷ ಎಸ್.ಜಯಕರ್ ಶೆಟ್ಟಿ, ಡಾಎಚ್.ಎಸ್.ಮಲ್ಲಿ ರಕ್ತದಾನದ ಬಗ್ಗೆ ಮಾಹಿತಿ ನೀಡಿದರು.

ರೆಡ್‌ಕ್ರಾಸ್‌ನ ಕೋಶಾಧೀಕಾರಿ ಶಿವರಾಮ್ ಶೆಟ್ಟಿ, ಮುತ್ತಯ್ಯ ಶೆಟ್ಟಿ, ಗಣೇಶ್ ಆಚಾರ್ಯ ಉಪಸ್ಥಿತರಿದ್ದರು. ಪ್ರಾಧ್ಯಾಪಕ ಮರಳೀಧರ ಸ್ವಾಗತಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ರಮೇಶ್ ಎಂ. ವಂದಿಸಿದರು. ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರಾಧ್ಯಾಪಕಿ ಪ್ರೀತಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News