×
Ad

ಕಬಡ್ಡಿಗೆ ಜಗತ್ತಿನಲ್ಲೇ ಜನಮನ್ನಣೆಯಿದೆ: ಡಾ. ನರಸಿಂಹ ಶರ್ಮ

Update: 2016-11-21 15:16 IST

ಪುತ್ತೂರು, ನ.21: ಗ್ರಾಮ ಕ್ರೀಡೆಯಾಗಿರುವ ಕಬಡ್ಡಿ ಪ್ರಸ್ತುತ ಜಗತ್ತಿನಲ್ಲಿಯೇ ಜನಮನ್ನಣೆಯಿದೆ ಎಂದು ಪುತ್ತೂರಿನ ವೈದ್ಯ ಡಾ. ನರಸಿಂಹ ಶರ್ಮ ಹೇಳಿದರು. 

ಅವರು ಕುಂಡಡ್ಕ-ಮುಕ್ಕೂರು ನೇಸರ ಯುವಕ ಮಂಡಲದ ವತಿಯಿಂದ ಮುಕ್ಕೂರು ಶಾಲಾ ವಠಾರದಲ್ಲಿ ನಡೆದ ರವಿವಾರ ನಡೆದ ಪುರುಷರ ವಿಭಾಗದ ಕಬಡ್ಡಿ ಪಂದ್ಯಾಟ `ನೇಸರ ಕಪ್' ಉದ್ಘಾಟಿಸಿ ಮಾತನಾಡಿದರು. 

ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆ ಅತೀ ಅಗತ್ಯವಾಗಿದೆ. ಗ್ರಾಮೀಣ ಭಾಗದಲ್ಲಿ ಆಯೋಜಿಸಲಾಗುತ್ತಿರುವ ಇಂತಹ ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಮತ್ತು ವಿಕಸನಕ್ಕೆ ಪೂರಕವಾಗಿದೆ ಎಂದರು. 

ಸುಳ್ಯ ತಾಲೂಕು ಅಮೆಚೂರ್ ಕಬಡ್ಡಿ ಎಸೋಸಿಯೇಶನ್ ಪ್ರಧಾನ ಕಾರ್ಯದರ್ಶಿ ಕೆ.ಟಿ.ವಿಶ್ವನಾಥ ಮಾತನಾಡಿ ಅಮೆಚೂರು ಕಬಡ್ಡಿ ಅಸೋಸಿಯೇಶನನ್ ತಂಡಗಳ ಸಮಯ ಪಾಲನೆಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಇದಕ್ಕಾಗಿ ಹಗಲು ಮತ್ತು ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟಗಳಿಗೆ ಸೂಚಿತ ಸಮಯವನ್ನು ನಿಗದಿಪಡಿಸಿದೆ. ಈ ಸೂಚನೆ ಸಮರ್ಪಕವಾಗಿ ಅನುಷ್ಠಾನಗೊಂಡಾಗ ಕ್ರೀಡಾಕೂಟಗಳಿಗೆ ಅರ್ಥ ಬರುತ್ತದೆ ಎಂದರು.

ಪೆರುವಾಜೆ ಶ್ರೀ ಜಲದುರ್ಗಾ ದೇವಿ ದೇವಾಲಯದ ವ್ಯವಸ್ಥಾಪನಾ ಸಮಿತಿ  ಮಾಜಿ ಅಧ್ಯಕ್ಷ ಉಮೇಶ್ ನೇಸರ ಅಂಕಣ ಉದ್ಘಾಟಿಸಿದರು. ನೇಸರ ಯುವಕ ಮಂಡಲದ ಅಧ್ಯಕ್ಷ ಪ್ರಸಾದ್ ಕುಂಡಡ್ಕ ಅಧ್ಯಕ್ಷತೆ ವಹಿಸಿದ್ದರು. ಕುಂಡಡ್ಕ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ರಾಮಚಮದ್ರ ಚೆನ್ನಾವರ, ಯುವಕ ಮಂಡಲದ ಉಪಾಧ್ಯಕ್ಷ ಪೂವಪ್ಪ ನಾಯ್ಕ ಅಡೀಲು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘದ ಕಾರ್ಯದರ್ಶಿ ಕಿರಣ್ ಪ್ರಸಾದ್ ಸ್ವಾಗತಿಸಿದರು. ಪುರುಷೋತ್ತಮ ಕುಂಡಡ್ಕ ವಂದಿಸಿದರು. ಶಿಕ್ಷಕ ಶಶಿಕುಮಾರ್ ನಿರೂಪಿಸಿದರು. 
ಪಂದ್ಯಾಟದಲ್ಲಿ 16 ತಂಡಗಳು ಭಾಗವಹಿಸಿದ್ದು, ಪರಣೆ ನ್ಯೂ ಫ್ರೆಂಡ್ಸ್ ತಂಡ ಪ್ರಥಮ ಹಾಗೂ ಕಡಬ ಫ್ರೆಂಡ್ಸ್ ಕ್ಲಬ್ ದ್ವಿತೀಯ ಪ್ರಶಸ್ತಿ ಪಡೆದುಕೊಂಡಿತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News