ನ.22ರಂದು ಮಂಗಳೂರಿನಲ್ಲಿ ಬೃಹತ್ ‘ಶರೀಅತ್ ಸಂರಕ್ಷಣಾ’ ಸಮಾವೇಶ

Update: 2016-11-21 13:46 GMT

ಮಂಗಳೂರು, ನ.21: ಕೇಂದ್ರ ಸರಕಾರವು ಜಾರಿಗೊಳಿಸಲು ಉದ್ದೇಶಿಸಿರುವ ಸಮಾನ ನಾಗರಿಕ ಸಂಹಿತೆಯನ್ನು ವಿರೋಧಿಸಿ ಹಾಗು ಮುಸ್ಲಿಮ್ ವೈಯಕ್ತಿಕ ಕಾನೂನಿನಲ್ಲಿ ಸರಕಾರದ ಹಸ್ತಕ್ಷೇಪವನ್ನು ಖಂಡಿಸಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ನೇತೃತ್ವದಲ್ಲಿ ದ.ಕ. ಮತ್ತು ಉಡುಪಿ ಜಿಲ್ಲೆಯ 30ಕ್ಕೂ ಅಧಿಕ ಮುಸ್ಲಿಮ್ ಸಂಘಟನೆಗಳ ಸಹಭಾಗಿತ್ವದಲ್ಲಿ ನಗರದ ನೆಹರೂ ಮೈದಾನದಲ್ಲಿ ನ.22ರಂದು ಅಪರಾಹ್ನ 3 ಗಂಟೆಗೆ ‘ಶರೀಅತ್ ಸಂರಕ್ಷಣಾ ಸಮಾವೇಶ’ ನಡೆಯಲಿದೆ. 

ಮುಸ್ಲಿಮ್ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಹಾಜಿ ಕೆ.ಎಸ್. ಮುಹಮ್ಮದ್ ಮಸೂದ್‌ರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾವೇಶವನ್ನು ದ.ಕ.ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಉದ್ಘಾಟಿಸಲಿದ್ದಾರೆ. ಸಮಸ್ತ ಕೇಂದ್ರ ಮುಶಾವರ ಸದಸ್ಯ ಹಾಜಿ ಅಬ್ದುಲ್ ಜಬ್ಬಾರ್ ಮುಸ್ಲಿಯಾರ್ ಮಿತ್ತಬೈಲ್ ದುಆಗೈಯಲಿದ್ದಾರೆ.

ಮಂಗಳೂರು ಕೇಂದ್ರ ಜುಮಾ ಮಸೀದಿಯ ಖತೀಬ್ ಸದಕತುಲ್ಲಾ ಫೈಝಿ, ಪಿಎಫ್‌ಐ ರಾಷ್ಟ್ರೀಯ ಅಧ್ಯಕ್ಷ ಕೆ.ಎಂ.ಶರೀಫ್, ಯುನಿವೆಫ್ ರಾಜ್ಯಾಧ್ಯಕ್ಷ ರಫೀಉದ್ದೀನ್ ಕುದ್ರೋಳಿ, ಜಮಾಅತೆ ಇಸ್ಲಾಮ್ ಹಿಂದ್‌ನ ಮುಹಮ್ಮದ್ ಕುಂಞಿ, ಎಸ್‌ಕೆಎಸ್‌ಎಂ ಸಂಘಟನೆಯ ಉಮ್ಮರ್ ಶರೀಫ್, ಚೊಕ್ಕಬೆಟ್ಟು ಮಸೀದಿಯ ಖತೀಬ್ ಅಬ್ದುಲ್ ಅಝೀಝ್ ದಾರಿಮಿ ಕಲ್ಲೇಗ, ಕುದ್ರೋಳಿ ಜಾಮಿಯಾ ಮಸೀದಿಯ ಖತೀಬ್ ಮುಫ್ತಿ ಅಬ್ದುಲ್ ಮನ್ನಾನ್, ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಯಾಸೀನ್ ಮಲ್ಪೆ ಮುಖ್ಯ ಭಾಷಣ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಯೆನೆಪೊಯ ವಿವಿ ಕುಲಪತಿ ವೈ. ಅಬ್ದುಲ್ಲ ಕುಂಞಿ, ಮಂಗಳೂರು ಹಜ್ ನಿರ್ವಹಣಾ ಸಮಿತಿಯ ಅಧ್ಯಕ್ಷ ವೈ. ಮುಹಮ್ಮದ್ ಕುಂಞಿ, ಸಚಿವ ಯು.ಟಿ.ಖಾದರ್, ಶಾಸಕ ಬಿ.ಎ.ಮೊಯ್ದಿನ್ ಬಾವಾ, ಮುಸ್ಲಿಮ್ ಸೆಂಟ್ರಲ್ ಕಮಿಟಿಯ ಉಪಾಧ್ಯಕ್ಷ ಹಾಜಿ ಇಬ್ರಾಹೀಂ ಕೋಡಿಜಾಲ್, ಜಮಾಅತೆ ಇಸ್ಲಾಮೀ ಹಿಂದ್‌ನ ಕೆ.ಎಂ.ಶರೀಫ್, ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಹಾಜಿ ಎಸ್.ಎಂ. ರಶೀದ್, ಉಡುಪಿ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಯಹ್ಯಾ ನಕ್ವಾ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಬಿ.ಎ.ಮುಹಮ್ಮದ್ ಹನೀಫ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್, ಮಾಜಿ ಮೇಯರ್ ಕೆ.ಅಶ್ರಫ್, ಎಸ್‌ಡಿಪಿಐ ಮುಖಂಡ ಹನೀಫ್ ಖಾನ್ ಕೊಡಾಜೆ, ಮುಮ್ತಾಝ್ ಅಲಿ ಕೃಷ್ಣಾಪುರ, ಸಾದುದ್ದೀನ್ ಸ್ವಾಲಿಹ್, ಜಾಫರ್ ಸಾದಿಕ್ ಫೈಝಿ, ಯು.ಎನ್. ಅಬ್ದುರ್ರಝಾಕ್, ಅಬ್ದುರ್ರವೂಫ್ ಪುತ್ತಿಗೆ, ಮನ್ಸೂರ್ ಅಹ್ಮದ್, ಅಹ್ಮದ್ ಬಾಷಾ ತಂಙಳ್, ಮೂಸಾ ಮೊಯ್ದಿನ್, ಯು.ಕೆ. ಮೋನು, ಝಕರಿಯಾ ಜೋಕಟ್ಟೆ, ಬಿ.ಎಂ.ಫಾರೂಕ್, ಇಸ್ಮಾಯೀಲ್ ಹಾರೂನ್, ಸಿರಾಜ್ ಅಹ್ಮದ್ ಇನ್‌ಲ್ಯಾಂಡ್, ಬಾಷಾ ಸಾಹೇಬ್ ಕುಂದಾಪುರ, ಕೆ.ಎಸ್. ಇಮ್ತಿಯಾಝ್ ಅಹ್ಮದ್ ಕಾರ್ಕಳ, ಕೆ.ಎಸ್. ಖಲೀಲ್ ಅಹ್ಮದ್ ಕಾರ್ಕಳ, ಸಿ. ಅಹ್ಮದ್ ಜಮಾಲ್, ಇಕ್ಬಾಲ್ ಮುಲ್ಕಿ, ಅಲಿ ಹಸನ್, ಎಸ್.ಎಂ. ಫಾರೂಕ್, ಸೈಫ್ ಸುಲ್ತಾನ್, ಮುಸ್ತಫಾ ಕೆಂಪಿ, ಇಮ್ತಿಯಾಝ್ ಬಿ.ಎಸ್., ರಾಝಿಕ್, ಮತ್ತಿತರರು ಭಾಗವಹಿಸಲಿದ್ದಾರೆ.

ಬಹುಸಂಸ್ಕೃತಿಯನ್ನು ವಿರೋಧಿಸುತ್ತಾ ಬಂದಿರುವ ಕೋಮುವಾದಿ ಶಕ್ತಿಗಳ ಈ ಷಡ್ಯಂತ್ರದ ವಿರುದ್ಧ ನಾಡಿನ ಪ್ರಜ್ಞಾವಂತ ನಾಗರಿಕರು ಒಕ್ಕೊರಳಿನಿಂದ ಧ್ವನಿಯೆತ್ತಬೇಕಾಗಿದೆ. ಸಂವಿಧಾನ ಆಶಯವನ್ನು ಯಾವ ಬೆಲೆ ತೆತ್ತಾದರೂ ರಕ್ಷಿಸಬೇಕಾದ ತುರ್ತು ಅಗತ್ಯವಿದೆ ಎಂದಿರುವ ಸಂಘಟಕರು, ಈ ಸಮಾವೇಶದಲ್ಲಿ ಸುಮಾರು 50 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ.

ಸಮಾವೇಶ ಯಶಸ್ವಿಗೆ ಕರೆ

ಕೇಂದ್ರ ಸರಕಾರ ಜಾರಿಗೊಳಿಸಲು ಮುಂದಾಗಿರುವ ಸಮಾನ ನಾಗರಿಕ ಸಂಹಿತೆಯ ವಿರುದ್ಧ ನ.22ರಂದು ಮಂಗಳೂರಿನಲ್ಲಿ ನಡೆಯಲಿರುವ ಶರೀಅತ್ ಸಂರಕ್ಷಣಾ ಸಮಾವೇಶದ ಯಶಸ್ವಿಗೆ ದ.ಕ.ಜಿಲ್ಲಾ ಮುಸ್ಲಿಂ ಲೀಗ್ ಉಪಾಧ್ಯಕ್ಷ ಹಾಜಿ ಸೈಯದ್ ಬಾಷಾ ತಂಙಳ್ ಕರೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News