ನೋಟು ರದ್ದತಿ ವಿರುದ್ಧ ಇಂದು ಧರಣಿ

Update: 2016-11-21 18:20 GMT

ಮಂಗಳೂರು, ನ.21: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು 500 ಮತ್ತು 1,000 ರೂ. ನೋಟುಗಳನ್ನು ಅಮಾನ್ಯಗೊಳಿಸಿದ ಪರಿಣಾಮ ಜನಸಾಮಾನ್ಯರು ಪರದಾಡುತ್ತಿದ್ದಾರೆ. ಜನಸಾಮಾನ್ಯರಿಗೆ ಆಗಿರುವ ತೊಂದರೆಯನ್ನು ಖಂಡಿಸಿ ಸಿಐಟಿಯು ದ.ಕ. ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನ.22ರಂದು ಅಪರಾಹ್ನ 3:30ಕ್ಕೆ ದ.ಕ. ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ಸಿಐಟಿಯು ದ.ಕ. ಜಿಲ್ಲಾ ಪ್ರ.ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News