ಉಡುಪಿ ಜಿಲ್ಲೆಯಲ್ಲಿ ಕೇಬಲ್ ಡಿಜಿಟಿಲೀಕರಣ ಸಂಪೂರ್ಣ

Update: 2016-11-23 14:36 GMT

ಉಡುಪಿ, ನ.23: ಕೇಂದ್ರ ಸರಕಾರದ ಸೂಚನೆಯಂತೆ ಉಡುಪಿ ಜಿಲ್ಲೆಯ ಎಲ್ಲಾ ನಗರ ಪ್ರದೇಶಗಳಲ್ಲಿ ಸೆಟ್‌ಟಾಪ್ ಬಾಕ್ಸ್‌ಗಳನ್ನು ಅಳವಡಿಸುವ ಕಾರ್ಯದಲ್ಲಿ ಸಂಪೂರ್ಣ ಗುರಿ ಸಾಧಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಅನುರಾಧಾ ಜಿ. ತಿಳಿಸಿದ್ದಾರೆ.

ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲೆಯ ಕೇಬಲ್ ಆಪರೇಟರ್‌ಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಜಿಲ್ಲೆಯ ನಗರಪ್ರದೇಶದಲ್ಲಿ ಸೆಟ್‌ಟಾಪ್ ಬಾಕ್ಸ್ ಅಳವಡಿಕೆಗೆ 2016ರ ಡಿ.31 ಕೊನೆಯ ದಿನವಾಗಿದ್ದು, ಈ ದಿನದ ಒಳಗೆ ಜಿಲ್ಲೆಯ ನಗರಪ್ರದೇಶದ ಎಲ್ಲಾ ಮನೆಗಳಲ್ಲಿ ಸೆಟ್‌ಟಾಪ್ ಬಾಕ್ಸ್‌ಗಳನ್ನು ಅಳವಡಿಸಲಾಗಿದೆ. ಮುಂದಿನ ಹಂತದಲ್ಲಿ ಜಿಲ್ಲೆಯ ಎಲ್ಲಾ ಗ್ರಾಮಾಂತರ ಪ್ರದೇಶಗಳಲ್ಲಿ ಸೆಟ್‌ಟಾಪ್ ಬಾಕ್ಸ್ ಗಳನ್ನು ಅಳವಡಿಸಬೇಕಾಗಿದೆ ಎಂದವರು ತಿಳಿಸಿದರು.

ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲಿ ಸೆಟ್‌ಟಾಪ್ ಬಾಕ್ಸ್‌ಗಳನ್ನು ಅಳವಡಿಸುವ ಕುರಿತಂತೆ ಎಲ್ಲಾ ಕೇಬಲ್ ಆಪರೇಟರ್‌ಗಳು ಜನರಿಗೆ ಸೂಕ್ತ ಮಾಹಿತಿ ಹಾಗೂ ಅರಿವು ಮೂಡಿಸುವಂತೆ ಸೂಚಿಸಿದ ಅಪರ ಜಿಲ್ಲಾಧಿಕಾರಿ, ಇದುವರೆಗೂ ಗ್ರಾಮಾಂತರ ಪ್ರದೇಶದಲ್ಲಿ ಸೆಟ್‌ಟಾಪ್ ಬಾಕ್ಸ್ ಅಳವಡಿಸಿದ್ದಲ್ಲಿ ಅದರ ವಿವರಗಳನ್ನು ಸಲ್ಲಿಸುವಂತೆ ಮತ್ತು ಜಿಲ್ಲೆಯಲ್ಲಿ ಎಂಎಸ್‌ಒಯು ಆಗಲು ಇಚ್ಛಿಸುವವರು ಕೇಂದ್ರ ಸರಕಾರದ ಉಚಿತ ಟೋಲ್ ಸಂಖ್ಯೆ 18001804343 ಗೆ ಕರೆಮಾಡಿ ನೊಂದಣಿ ಮಾಡಿಕೊಳ್ಳಬಹುದು ಎಂದು ಅನುರಾಧ ಹೇಳಿದರು.

ಸಭೆಯಲ್ಲಿ ಜಿಲ್ಲೆಯ ವಿವಿಧ ಕೇಬಲ್ ಆಪರೇಟರ್‌ಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News