×
Ad

ಅಕ್ರಮ ಮದ್ಯ ಮಾರಾಟ: ಓರ್ವನ ಬಂಧನ

Update: 2016-11-24 23:47 IST

ಶಿವಮೊಗ್ಗ, ನ. 24: ಯಾವುದೇ ಪರವಾನಿಗೆಯಿಲ್ಲದೆ ಕಾನೂನುಬಾಹಿರವಾಗಿ ಮನೆಯ ಮುಂಭಾಗದಲ್ಲಿ ಸಾರ್ವಜನಿಕರಿಗೆ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಪೊಲೀಸರು ಓರ್ವನನ್ನು ಬಂಧಿಸಿದ ಘಟನೆ ತಾಲೂಕಿನ ಹೊಸಕೊಪ್ಪ ಗ್ರಾಮದಲ್ಲಿ ವರದಿಯಾಗಿದೆ. ನಾಗರಾಜ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಖಚಿತ ವರ್ತಮಾನದ ಮೇರೆಗೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ವಿವಿಧ ಕಂಪೆನಿಯ ಮದ್ಯದ ಬಾಟಲಿ, ಪೌಚ್ ಹಾಗೂ 390 ರೂ.ವನ್ನು ಆರೋಪಿಯಿಂದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News