ಗೃಹಿಣಿಯ ಸಾಮೂಹಿಕ ಅತ್ಯಾಚಾರ: ಮೂವರ ಸೆರೆ

Update: 2016-11-25 04:30 GMT

ಆನೇಕಲ್, ನ.25: ಗೃಹಿಣಿಯೊಬ್ಬರ ಮೇಲೆ ಮೂವರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿದ ಕೃತ್ಯ ಆನೇಕಲ್ ತಾಲೂಕಿನ ಹುಲ್ಲಹಳ್ಳಿ ಎಂಬಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿ ಮೂವರನ್ನು ಬನ್ನೇರುಘಟ್ಟ ಪೊಲೀಸರು ಬಂಧಿಸಿದ್ದಾರೆ.
 ವಿನೋದ್(20), ಮಣಿ(19) ಹಾಗೂ ರಾಜು(21) ಬಂಧಿತ ಆರೋಪಿಗಳು. ಬಂಧಿತ ಮೂವರು ತಮಿಳುನಾಡು ಮೂಲದವರಾಗಿದ್ದು, ಇಲ್ಲಿನ ಕೋಳಿ ಫಾರ್ಮ್ ಲೇಔಟ್‌ವೊಂದರಲ್ಲಿ ವಾಸ್ತವ್ಯವಿದ್ದರು. ಪೇಯ್ಟಿಂಗ್ ಕೆಲಸ ಮಾಡುತ್ತಿದ್ದ ಆರೋಪಿಗಳು 28ರ ಹರೆಯದ ವಿವಾಹಿತ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವುದು ಎರಡು ದಿನಗಳ ಹಿಂದೆ ನಡೆದಿದೆ. ಸಂತ್ರಸ್ತ ಮಹಿಳೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಬಗ್ಗೆ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News