ಎಸೆಸೆಲ್ಸಿಯಲ್ಲಿ ಉತ್ತಮ ಫಲಿತಾಂಶ ಪಡೆಯಲು ಡಿಸಿ ಕರೆ

Update: 2016-11-25 17:38 GMT

ಮಡಿಕೇರಿ, ನ.25: ಜಿಲ್ಲೆಯ ಸರಕಾರಿ ಅನುದಾನಿತ ಹಾಗೂ ಅನುದಾನರಹಿತ ಪ್ರೌಢಾಶಾಲೆಗಳ ಮುಖ್ಯ ಶಿಕ್ಷಕರ ಸಭೆಯು ಜಿಲ್ಲಾಧಿಕಾರಿ ಡಾ.ವಿನ್ಸೆಂಟ್ ಡಿಸೋಜ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು. ನಗರದ ಸಂತ ಮೈಕಲರ ಶಾಲಾ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸೆಪ್ಟಂಬರ್ ತಿಂಗಳಲ್ಲಿ ನಡೆಸಲಾದ ಎಸೆಸೆಲ್ಸಿ ಅರ್ಧ ವಾರ್ಷಿಕ ಪರೀಕ್ಷೆಯ ಪ್ರಗತಿ ಪರಿಶೀಲನೆ ನಡೆಸಲಾಯಿತು. ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಮಾತನಾಡಿ, ಜಿಲ್ಲೆಯ ಎಲ್ಲಾ ಮುಖ್ಯ ಶಿಕ್ಷಕರು ತಮ್ಮ ಶಾಲೆಗಳು ಪ್ರಸಕ್ತ ವರ್ಷದಲ್ಲಿ ಶೇ.100 ಫಲಿತಾಂಶ ಪಡೆಯಲು ಶ್ರಮಿಸಬೇಕು. ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳಿಗೆ ವಿಶೇಷ ಆದ್ಯತೆ ನೀಡಿ ಅವರೂ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಶ್ರಮವಹಿಸಬೇಕು ಎಂದು ತಿಳಿಸಿದರು.

ಸರಕಾರದ ಶೈಕ್ಷಣಿಕ ಯೋಜನೆಗಳು ಪ್ರತೀ ವಿದ್ಯಾರ್ಥಿಗೂ ತಲುಪಬೇಕು. ವಿದ್ಯಾರ್ಥಿಗಳು 8ಮತ್ತು 9ನೆ ತರಗತಿಗಳಲ್ಲಿರುವಾಗಲೇ ಅವರ ಬಗ್ಗೆ ಹೆಚ್ಚಿನ ಗಮನ ಹರಿಸಿದರೆ 10ನೆ ತರಗತಿಯ ಎಸೆಸೆಲ್ಸಿ ಪರೀಕ್ಷೆ ಬರೆಯಲು ಸನ್ನದ್ಧರಾಗುತ್ತಾರೆ. ಇದರಿಂದ ಶಿಕ್ಷಕರ ಹೊರೆಯೂ ಕಡಿಮೆಯಾಗುವುದು, ವಿದ್ಯಾರ್ಥಿಗಳ ಕಲಿಕೆಯೂ ಸುಗಮವಾಗುವುದು ಎಂದು ಅಭಿಪ್ರಾಯಪಟ್ಟರು.
ಕ  ೆದ ಸಾಲಿನಲ್ಲಿ ಉತ್ತಮ ಫಲಿತಾಂಶ ಪಡೆದ ಶಾಲೆಗಳನ್ನು ಜಿಲ್ಲಾಧಿಕಾರಿ ಇದೇ ವೇಳೆ ಶ್ಲಾಘಿಸಿದರು. ಪ್ರಸ್ತುತ ಸಾಲಿನ ಎಸೆಸೆಲ್ಸಿ ಪರಿಕ್ಷೆಯ ಫಲಿತಾಂಶವನ್ನು ಉತ್ತಮ ಪಡಿಸಲು ಎಲ್ಲಾ ಅಧಿಕಾರಿಗಳು ುುಖ್ಯ ಶಿಕ್ಷಕರು ತಮ್ಮ ಜವಾಬ್ದಾರಿಗಳನ್ನು ಅರಿತು 
   ಕೆಲಸ ನಿರ್ವಹಿಸಬೇಕು ಎಂದು ಸೂಚಿಸಿದರು. ಸಭೆಗೆ ಆಗಮಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲೆಯಲ್ಲಿ ಮಕ್ಕಳ ಸುರಕ್ಷತೆಗಾಗಿ ಮುಖ್ಯ ಶಿಕ್ಷಕರು ವಹಿಸಬೇಕಾದ ಜಾಗೃತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಿ.ಆರ್.ಬಸವರಾಜು ಅವರು ಮಾತನಾಡಿ, ಎಸೆಸೆಲ್ಸಿ ಫಲಿತಾಂಶವನ್ನು ಉತ್ತಮಪಡಿಸಲು ಕೈಗೊಳ್ಳಬಹುದಾದ ಕ್ರಮಗಳ ಕುರಿತು ಮಾರ್ಗದರ್ಶನ ನೀಡಿದರು. ತಾವು ಶಾಲೆಗಳಿಗೆ ಭೇಟಿ ನೀಡಿದಾಗ ಗಮನಿಸಿದ ಅಂಶಗಳನ್ನು ವಿಶ್ಲೇಷಿಸಿದರು. ಪರೀಕ್ಷೆ   
 ಫಲಿತಾಂಶವನ್ನು ತಾಲೂಕು ವಾರು, ಶಾಲಾವಾರು ಹಾಗೂ ವಿಷಯವಾರು ವಿಶ್ಲೇಷಣೆ ಮಾಡಿ ಪಿಪಿಟಿ ಕಾರ್ಯಾಗಾರದ ಮೂಲಕ ಮಾಹಿತಿ ನೀಡಲಾಯಿತು. ಈ ಫಲಿತಾಂಶದೊಂದಿಗೆ 2015-16ನೆ ಸಾಲಿನ ವಾರ್ಷಿಕ ಪರೀಕ್ಷಾ ಫಲಿತಾಂಶವನ್ನು ತುಲನೆ ಮಾಡಲಾಯಿತು. ಕಳೆದ ಸಾಲಿನಲ್ಲಿ ಶೇ.100ರಷ್ಟು ಸಾಧನೆ ಮಾಡಿದ ಹಾಗೂ ಉತ್ತಮ ಫಲಿತಾಂಶ ಪಡೆದ ಶಾಲೆಗಳ ಮುಖ್ಯ ಶಿಕ್ಷಕರೊಂದಿಗೆ ಉತ್ತಮ ಫಲಿತಾಂಶ ಪಡೆಯಲು ಅವರು ಕೈಗೊಂಡ ತಂತ್ರಗಳ ಕುರಿತು ಚರ್ಚಿಸಲಾಯಿತು. ಅಂತೆಯೇ ಕನಿಷ್ಠ ಫಲಿತಾಂಶ ಪಡೆದ ಶಾಲೆಗಳ ಮುಖ್ಯ ಶಿಕ್ಷಕರೊಂದಿಗೆ ಚರ್ಚಿಸಿ ಕಡಿಮೆ ಸಾಧನೆಗೆ ಕಾರಣಗಳು ಮತ್ತು ಪ್ರಸ್ತುತ ಸಾಲಿನಲ್ಲಿ ಉತ್ತಮ ಪಡಿಸಲು ಕೈಗೊಳ್ಳಬಹುದಾದ ಕಾರ್ಯಕ್ರಮಗಳ ಕುರಿತು ಮಾರ್ಗದರ್ಶನ ನೀಡಲಾಯಿತು. 2016-17ನೆ ಸಾಲಿನ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಉತ್ತಮ ಪಡಿಸಲು ಮುಖ್ಯ ಶಿಕ್ಷಕರು ತಮ್ಮ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳನ್ನು ದತ್ತು ತೆಗೆದು ಕೊಂಡಿರುವುದು, ವಿಶೇಷ ತರಗತಿಗಳ ವೇಳಾಪಟ್ಟಿ ತಯಾರಿಸಿ ಅದರಂತೆ ಶಾಲಾ ಅವಧಿಯ ಮೊದಲ ಮತ್ತು ನಂತರ ತರಗತಿ ನಿರ್ವಹಣೆ ವಿದ್ಯಾರ್ಥಿಗಳ ಗುಂಪು ಚಟುವಟಿಕೆ ಪೋಷಕರ ಸಭೆ ಕರೆದು ಅವರೊಂದಿಗೆ ಚರ್ಚೆ, ಸಂವಹನ ಜನವರಿಯ ನಂತರ ವಿದ್ಯಾರ್ಥಿಗಳನ್ನು ಶಾಲೆಗಳಲ್ಲಿಯೇ ಉಳಿಸಿ ರಾತ್ರಿ ತರಗತಿ ನಡೆಸುವ ಬಗ್ಗೆ ಹಲವು ಹಂತದಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಸಭೆಗೆ ವಿವರಿಸಲಾಯಿತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News