×
Ad

ಗಾಂಜಾ ಪ್ರಕರಣ: ಇಬ್ಬರ ಬಂಧನ

Update: 2016-11-25 23:15 IST

ಶಿವಮೊಗ್ಗ, ನ.25: ಶಿವಮೊಗ್ಗ ಹಾಗೂ ಸಾಗರ ತಾಲೂಕಿನಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಅಕ್ರಮವಾಗಿ ಗಾಂಜಾ ಗಿಡ ಬೆಳೆದಿದ್ದ ಆರೋಪದ ಮೇರೆಗೆ ಪೊಲೀಸರು ಇಬ್ಬರನ್ನು ಬಂಧಿಸಿ, ಲಕ್ಷಾಂತರ ರೂ. ವೌಲ್ಯದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿರುವ ಘಟನೆ ವರದಿಯಾಗಿದೆ. ಶಿವಮೊಗ್ಗ ವರದಿ: ತಾಲೂಕಿನ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ತುಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸನ್ನಿವಾಸ ಗ್ರಾಮದಲ್ಲಿ ಆಪಾದಿತ ನಾಗರಾಜ್(45) ಎಂಬವರು ತಮ್ಮ ಮನೆಯ ಹಿಂಭಾಗದ ಖಾಲಿ ಜಾಗದಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದರು. ಈ ಕುರಿತಂತೆ ಜಿಲ್ಲಾ ಅಪರಾಧ ಪತ್ತೆ ದಳ ಪೊಲೀಸರಿಗೆ ಖಚಿತ ವರ್ತಮಾನ ಲಭಿಸಿದ್ದು, ಇದರ ಆಧಾರದ ಮೇಲೆ ದಾಳಿ ನಡೆಸಿದ್ದರು. ಆರೋಪಿಯನ್ನು ಬಂಧಿಸಿ, ಸರಿಸುಮಾರು 1 ಲಕ್ಷ ರೂ. ವೌಲ್ಯದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಆರೋಪಿಯ ವಿರುದ್ಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಗರ ವರದಿ: ತಾಲೂಕಿನ ಚಿಕ್ಕಮತ್ತೂರು ಗ್ರಾಮದ ಸರ್ವೇ ನಂಬರ್ 107 ರಲ್ಲಿರುವ ಬಗರ್‌ಹುಕುಂ ಜಮೀನಿನಲ್ಲಿ, ಶುಂಠಿ ಬೆಳೆಯ ನಡುವೆ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪದ ಮೇರೆಗೆ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಹುಚ್ಚಪ್ಪಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆಪಾದಿತನು ಶುಂಠಿ ಬೆಳೆಯ ನಡುವೆ ಾಂಜಾ ಗಿಡಗಳನ್ನು ಬೆಳೆಸಿದ್ದ. ಈ ಕುರಿತಂತೆ ಪೊಲೀಸರಿಗೆ ಖಚಿತ ವರ್ತಮಾನ ಲಭಿಸಿದ್ದು, ಇದರ ಆಧಾರದ ಮೇಲೆ ಸದರಿ ಜಮೀನಿನಲ್ಲಿ ಪರಿಶೀಲನೆ ನಡೆಸಿದಾಗ ಸರಿಸುಮಾರು 27 ಸಾವಿರ ರೂ. ವೌಲ್ಯದ ಗಾಂಜಾ ಗಿಡಗಳನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News