ನ.29ರಂದು ಯುವ ಸೌರಭ
Update: 2016-11-26 23:50 IST
ಉಡುಪಿ, ನ.26: ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಯುವ ಸೌರಭ ಕಾರ್ಯಕ್ರಮವು ನ.29ರಂದು ಬೆಳಗ್ಗೆ 10ಕ್ಕೆ ಹೆಬ್ರಿ ಸರಕಾರಿ ಪದವಿ ಪೂರ್ವ ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ. ಸಚಿವ ಪ್ರಮೋದ್ ಮಧ್ವರಾಜ್ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಸುನೀಲ್ ಕುಮಾರ್ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟನೆ ತಿಳಿಸಿದೆ.