×
Ad

25 ಇಲಾಖೆಗಳಲ್ಲಿ ಇ-ಆಫೀಸ್ ತಂತ್ರಾಂಶ: ಮುಖ್ಯಮಂತ್ರಿ

Update: 2016-11-27 00:01 IST


ಉಡುಪಿ, ನ.26: ರಾಜ್ಯದ 25 ಇಲಾಖೆ ಮತ್ತು ಕಚೇರಿಗಳಲ್ಲಿ ಕಾಗದ ರಹಿತ ಕಚೇರಿಯ ಉನ್ನತೀಕರಿಸಿದ ಇ-ಆಫೀಸ್ ತಂತ್ರಾಂಶವನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಜಲಮಂಡಳಿ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಕರ್ನಾಟಕ ಮೌಲ್ಯಮಾಪನ ಪ್ರಾಧಿಕಾರ, ಇ-ಆಡಳಿತ ಕೇಂದ್ರ ಇತ್ಯಾದಿ ಇಲಾಖೆಗಳಲ್ಲಿ ಇ-ಆಫೀಸ್ ತಂತ್ರಾಂಶ ಅನುಷ್ಠಾನವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯದ ಯಾವ ಯಾವ ಇಲಾಖೆಗಳನ್ನು ಹಾಗೂ ಕಚೇರಿಗಳನ್ನು ಕಾಗದರಹಿತ ಕಚೇರಿಗಳನ್ನಾಗಿ ಮಾಡಲಾಗಿದೆ. ಕಾಗದ ರಹಿತ ಕಚೇರಿ ಮತ್ತು ಪಾರದರ್ಶಕ ಆಡಳಿತ ತರಲು ಸರಕಾರ ಯಾವ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂಬ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಸದನದಲ್ಲಿ ಗಮನ ಸೆಳೆದ ಪ್ರಶ್ನೆಗೆ ಮುಖ್ಯಮಂತ್ರಿಯವರು ಈ ಉತ್ತರ ನೀಡಿದರು.
ತಂತ್ರಾಂಶದ ಅನುಷ್ಠಾನವು ಭ್ರಷ್ಟಾಚಾರ ನಿಯಂತ್ರಣಕ್ಕೆ ಸಾಧನವಾಗುವ ಸಾಧ್ಯತೆ ಇದೆ. ಅಲ್ಲದೆ ಇ-ಆಫೀಸ್ ತಂತ್ರಾಂಶವನ್ನು ಹಂತ ಹಂತವಾಗಿ ಎಲ್ಲ ಕಚೇರಿಗಳಲ್ಲಿ ವಿಸ್ತರಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಉತ್ತರ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News