ನ.28ರಂದು ಎಸ್‌ಡಿಪಿಐಯಿಂದ ಬಿ.ಸಿ.ರೋಡ್‌ನಲ್ಲಿ ಆಕ್ರೋಶ ದಿನ
Update: 2016-11-27 15:45 IST
ಬಂಟ್ವಾಳ, ನ. 27: ಕೇಂದ್ರ ಸರಕಾರ ಯಾವುದೇ ಪೂರ್ವ ತಯಾರಿ ಇಲ್ಲದೆ 500, 1000 ರೂ. ಮುಖಬೆಲೆಯ ನೋಟುಗಳನ್ನು ಅಮಾನ್ಯಗೊಳಿಸಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಜನಸಾಮಾನ್ಯರು ಸಂಕಷ್ಟಕ್ಕೊಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ಜನ ವಿರೋಧಿ ನೀತಿಯ ವಿರುದ್ಧ ದೇಶಾದ್ಯಂತ ಹಮ್ಮಿಕೊಂಡಿರುವ ’ಆಕ್ರೋಶ ದಿನ’ ಅಂಗವಾಗಿ’ ಎಸ್‌ಡಿಪಿಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ನ.28ರಂದು ಬೆಳಗ್ಗೆ 10 ಗಂಟೆಗೆ ಬಿ.ಸಿ.ರೋಡ್‌ನ ಮೇಲ್ಸೇತುವೆ ಕೆಳಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಕಾರ್ಯದರ್ಶಿ ಇಕ್ಬಾಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.