×
Ad

ಸುಪ್ರೀಂ ಕೋರ್ಟ್‌ನಿಂದ ನರೇಶ್ ಶೆಣೈ, ರಾಜ್ಯ ಸರಕಾರಕ್ಕೆ ನೋಟಿಸ್

Update: 2016-11-28 17:11 IST

ಮಂಗಳೂರು, ನ. 28: ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನರೇಶ್ ಶೆಣೈಗೆ ಹೈಕೋರ್ಟ್ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಬಾಳಿಗಾ ತಂದೆ ರಾಮಚಂದ್ರ ಬಾಳಿಗ ಸುಪ್ರೀಂ ಕೋರ್ಟ್‌ಗೆ ಹಾಕಿದ್ದ ಅರ್ಜಿಯು ಸೋಮವಾರ ಸ್ವೀಕಾರವಾಗಿದೆ. ಈ ಸಂಬಂಧ ಸುಪ್ರೀಂ ಕೋರ್ಟ್ ಆರೋಪಿ ನರೇಶ್ ಶೆಣೈ ಮತ್ತು ಕರ್ನಾಟಕ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

  ಬಾಳಿಗಾ ಹತ್ಯೆ ಪ್ರಕರಣದ ತನಿಖೆ ಪೂರ್ಣಗೊಳ್ಳುವ ಮೊದಲೇ ನರೇಶ್ ಶೆಣೈಯನ್ನು ಹೈಕೋರ್ಟ್ ಜಾಮೀನು ಮೇಲೆ ಬಿಡುಗಡೆಗೊಳಿಸಿತ್ತು. ಇದನ್ನು ಪ್ರಶ್ನಿಸಿ ರಾಮಚಂದ್ರ ಬಾಳಿಗಾ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿ ಸ್ವೀಕಾರ ಮಾಡಿದ ಸುಪ್ರೀಂ ಕೋರ್ಟ್ ಆರೋಪಿ ನರೇಶ್ ಶೆಣೈ ಮತ್ತು ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ ಎಂದು ಬಾಳಿಗ ಕುಟುಂಬದ ಪರ ಹೈಕೋರ್ಟ್ ವಕೀಲ ರವೀಂದ್ರನಾಥ ಕಾಮತ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News