×
Ad

ಸ್ನಾತಕೋತ್ತರ ವಾಣಿಜ್ಯ ವಿಭಾಗದ ವಿದ್ಯಾರ್ಥಿ ವಿನಿಮಯ ಕಾರ್ಯಕ್ರಮ

Update: 2016-11-28 19:04 IST

ಮಂಗಳೂರು, ನ.28: ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ.ಕೆ.ಭೈರಪ್ಪರ ಮಾರ್ಗದರ್ಶನದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ನಿಮಯ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ವಿಶ್ವವಿದ್ಯಾನಿಲಯ ಕಾಲೇಜಿನ ವಿದ್ಯಾರ್ಥಿಗಳು ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಾಣಿಜ್ಯ ವಿಭಾಗಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಹಾಗೂ ವಿಭಾಗಗಳಿಗೆ ಭೇಟಿ ನೀಡಿದರು. ಇದಕ್ಕೆ ಪ್ರತಿಯಾಗಿ ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇಲ್ಲಿನ ಸ್ನಾತಕೋತ್ತರ ವಾಣಿಜ್ಯ ವಿಭಾಗಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ವಾಣಿಜ್ಯ ಹಾಗೂ ವ್ಯವಹಾರ ಕ್ಷೇತ್ರಕ್ಕೆ ಸಂಬಂಧಪಟ್ಟ ಹಲವಾರು ವಿಷಯಗಳ ಬಗ್ಗೆ ಸಂವಹನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವು ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಅಧ್ಯಕ್ಷ ಪ್ರೊ.ವೈ.ಮುನಿರಾಜು, ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲ ಡಾ.ಉದಯ ಕುಮಾರ್ ಎಂ.ಎ. ಹಾಗೂ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕ ಡಾ.ಎ.ಸಿದ್ಧಿಕ್ ಅವರ ನೇತೃತ್ವದಲ್ಲಿ ಹಾಗೂ ಇತರ ಉಪನ್ಯಾಸಕರ ಸಹಕಾರದಲ್ಲಿ ನಡೆಯಿತು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News