×
Ad

ಕಲ್ಲಾಪು-ಅಂಬತ್ತಡಿ ರಸ್ತೆ ಅಭಿವೃದ್ಧಿಗೆ 23 ಲಕ್ಷ ಬಿಡುಗಡೆ: ಖಾದರ್

Update: 2016-11-28 22:43 IST

ಮಂಗಳೂರು, ನ. 28: ಸ್ಥಳೀಯ ಜನರ ಬಹುಕಾಲದ ಬೇಡಿಕೆಯಾಗಿದ್ದ ಕಲ್ಲಾಪು-ಅಂಬತ್ತಡಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಕೊನೆಗೂ ಅನುದಾನ ಬಿಡುಗಡೆಯಾಗಿದೆ. ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಅವರ ಶಿಫಾರಸಿನ ಮೇರೆಗೆ ಮುಖ್ಯಮಂತ್ರಿ ನಿಧಿಯಿಂದ ಕಲ್ಲಾಪುನಿಂದ ಅಂಬತ್ತಡಿಯನ್ನು ಸಂಪರ್ಕಿಸುವ ರಸ್ತೆ ಅಭಿವೃದ್ಧಿಗೆ 23 ಲಕ್ಷ ರೂ. ಬಿಡುಗಡೆಯಾಗಿದೆ.

ಈ ಬಗ್ಗೆ ಪತ್ರಿಕೆಗೆ ಪ್ರತಿಕ್ರಿಯಿಸಿದ ಸಚಿವ ಯು.ಟಿ.ಖಾದರ್ ಅವರು, ಕಲ್ಲಾಪು-ಅಂಬತ್ತಡಿ ರಸ್ತೆ ಅಭಿವೃದ್ಧಿ ಸಹಿತ ಒಂಬತ್ತುಕೆರೆ ಐಟಿಐನಿಂದ ಅನಿಲ ಕಾಂಪೌಂಡ್‌ವರೆಗಿನ ಮುಖ್ಯರಸ್ತೆಯ ಅಭಿವೃದ್ಧಿಗೆ 16.5 ಲಕ್ಷ ರೂ. ಅನುದಾನ ಬಿಡುಗಡೆಗೊಂಡಿದೆ. ಈ ಎರಡೂ ಕಾಮಗಾರಿಗಳನ್ನು ಶೀಘ್ರದಲ್ಲೇ ಕೈಗೆತ್ತಿಕೊಳ್ಳುವುದಾಗಿ ಅವರು ತಿಳಿಸಿದರು.

ಅಲ್ಲದೆ, ಮಂಗಳೂರು ನಗರ ಮತ್ತು ಗ್ರಾಮೀಣ ಕ್ಷೇತ್ರಕ್ಕೆ 138 ಕೋಟಿ ರೂ. ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆಯ ಸರ್ವೇ ಕಾರ್ಯಕ್ಕೆ 15 ಲಕ್ಷ ರೂ. ವಿಶೇಷ ಅನುದಾನ ಬಿಡುಗಡೆಯಾಗಿದ್ದು, ಸರ್ವೇ ಕಾರ್ಯವನ್ನು ಪ್ರಾರಂಭಿಸುವುದಾಗಿ ಖಾದರ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News