ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ
Update: 2016-11-28 22:51 IST
ದಾವಣಗೆರೆ, ನ.28: ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಶಾಮನೂರು ರಸ್ತೆಯ ಮಾವಿನತೋಪು ಆಸ್ಪತ್ರೆಯ ಬಳಿ ಸೋಮವಾರ ಬೆಳಗ್ಗೆ ನಡೆದಿದೆ. ದಾವಣಗೆರೆಯಿಂದ ಶಾಮನೂರು ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣಕ್ಕೆ ಬಾರದೇ ಸಮೀಪದಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಇದರಿಂದ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಚಾಲಕ ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.