ತೆಂಕಮಿಜಾರಿನಲ್ಲಿ ಕಾನೂನು ಮಾಹಿತಿ ಶಿಬಿರ
Update: 2016-11-29 19:08 IST
ಮೂಡುಬಿದಿರೆ,ನ.29: ಹೋಬಳಿಮಟ್ಟದಲ್ಲಿ ನಡೆದ ಕಾನೂನು ಸಾಕ್ಷರತಾ ರಥ ಹಾಗೂ ಸಂಚಾರಿ ಜನತಾ ನ್ಯಾಯಾಲಯಕ್ಕೆ ಪೂರಕವಾಗಿ ತೆಂಕಮಿಜಾರು ಗ್ರಾಮ ಪಂಚಾಯಿತಿಯಲ್ಲಿ ಕಾನೂನು ಮಾಹಿತಿ ಶಿಬಿರ ನಡೆಯಿತು.
ಮೂಡುಬಿದಿರೆ ನ್ಯಾಯಾಲಯದ ನ್ಯಾಯಾದೀಶರಾದ ಅರುಣಾ ಕುಮಾರಿ ಶಿಬಿರವನ್ನು ಉದ್ಘಾಟಿಸಿದರು. ಮೂಡುಬಿದಿರೆ ವಕೀಲರ ಸಂಘದ ಅಧ್ಯಕ್ಷ ಬಾಹುಬಲಿ ಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು.
ಮೂಡುಬಿದಿರೆ ತಹಸೀಲ್ದಾರ್ ಮುಹಮ್ಮದ್ ಇಸಾಕ್, ಸಹಾಯಕ ಸರ್ಕಾರಿ ಅಭಿಯೋಜಕ ದೇವೇಂದ್ರ ಕುಮಾರ್, ಮರ್ಮಿನ್ ಲೋಬೋ, ಪಂಚಾಯತಿ ಅಧ್ಯಕ್ಷ ಬಾಲಕೃಷ್ಣ ದೇವಾಡಿಗ, ಪಿಡಿಒ ಸಾಯೀಶ್ ಚೌಟ ಉಪಸ್ಥಿತರಿದ್ದರು.
ರಾಕೇಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.
ನಿವೇಶನ ರಹಿತರಿಂದ ಅರ್ಜಿಯನ್ನು ಸ್ವೀಕರಿಸಲಾಯಿತು.