ಮೂಡುಬಿದಿರೆಯಲ್ಲಿ ಹುಖೂಖುಲ್ ಇಬಾದ್ ಸ್ನೇಹ ಸಮ್ಮಿಲನ
ಮೂಡುಬಿದಿರೆ, ನ.29: ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್, ಮೂಡುಬಿದಿರೆ ರೇಂಜ್ ಜಂ-ಇಯ್ಯತುಲ್ ಮುಅಲ್ಲಿಮೀನ್ ಮತ್ತು ಮದ್ರಸ ಮ್ಯಾನೇಜ್‌ಮೆಂಟ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ಹುಖೂಖುಲ್ ಇಬಾದ್ ಅಭಿಯಾನದ ಅಂಗವಾಗಿ ಮೂಡುಬಿದಿರೆ ರೇಂಜ್‌ನ ಉಲಮಾಗಳ ಮತ್ತು ಮದ್ರಸ ಮ್ಯಾನೇಜ್‌ಮೆಂಟ್ ಪದಾಧಿಕಾರಿಗಳ ಸ್ನೇಹ ಸಮ್ಮಿಲನವು ಮೂಡುಬಿದಿರೆ ಬದ್ರಿಯಾ ಟೌನ್ ಜುಮಾ ಮಸೀದಿಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಮೂಡುಬಿದಿರೆ ಟೌನ್ ಜುಮಾ ಮಸೀದಿಯ ಖತೀಬ್ ಮುಸ್ತಫಾ ಯಮಾನಿ ಉದ್ಘಾಟಿಸಿದರು. ಸಮಸ್ತ ಮುಶಾವರ ಕರ್ನಾಟಕ ಸದಸ್ಯ ಅಲ್‌ಹಾಜ್ ಇಬ್ರಾಹಿಂ ಬಾಖವಿ ಕೆ.ಸಿ ರೋಡ್ ಮತ್ತು ಟ್ಯಾಲೆಂಟ್ ಸಲಹೆಗಾರ ಹಾಜಿ ರಫೀಕ್ ಮಾಸ್ಟರ್ ಹುಖೂಖುಲ್ ಇಬಾದ್-ಮನುಕುಲದ ಸೇವೆ ಬಗ್ಗೆ ತರಗತಿ ನಡೆಸಿದರು.
ಮೂಡುಬಿದಿರೆ ರೇಂಜ್ ಮದ್ರಸ ಮ್ಯಾನೇಜ್‌ಮೆಂಟ್ ಅಧ್ಯಕ್ಷ ಅಬ್ದುಲ್ ರಹಿಮಾನ್ (ಅಬ್ಬುವಾಕ) ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಮೂಡುಬಿದಿರೆ ಬದ್ರಿಯ ಟೌನ್ ಜುಮಾ ಮಸೀದಿಯ ಅಧ್ಯಕ್ಷ ಹಾಜಿ ಎಂ.ಎಚ್ ಮುಹಮ್ಮದ್ ಇಕ್ಬಾಲ್, ಕಾರ್ಯದರ್ಶಿ ಅಬ್ದುಲ್ ಅಝೀರ್ ಮಾಲಿಕ್, ಕೋಶಾಧಿಕಾರಿ ಹಾಜಿ ಬಹಾವುದ್ದೀನ್, ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್‌ನ ಸಲಹೆಗಾರ ಅಬುಲ್ ಆಲ ಪುತ್ತಿಗೆ ಮೊದಲಾದವರು ಉಪಸ್ಥಿತರಿದ್ದರು.
ಮೂಡುಬಿದಿರೆ ರೇಂಜ್ ಜಂ-ಇಯ್ಯತುಲ್ ಮುಅಲ್ಲಿಮೀನ್‌ನ ಅಧ್ಯಕ್ಷ ಅಬ್ದುಲ್ ಸಲಾಂ ಯಮಾನಿ ದುಅ ನೆರವೇರಿಸಿದರು. ಮೂಡುಬಿದಿರೆ ರೇಂಜ್ ಜಂ-ಇಯ್ಯತುಲ್ ಮುಅಲ್ಲಿಮೀನ್‌ನ ಕಾರ್ಯದರ್ಶಿ ಮುಹಮ್ಮದ್ ರಫೀಕ್ ದಾರಿಮಿ ಸ್ವಾಗತಿಸಿದರು.
ಟ್ಯಾಲೆಂಟಿನ ಪ್ರಧಾನ ಕಾರ್ಯದರ್ಶಿ ಡಿ ಅಬ್ದುಲ್ ಹಮೀದ್ ಕಣ್ಣೂರು ಪ್ರಸ್ತಾವನೆಗೈದರು. ಮೂಡುಬಿದಿರೆ ರೇಂಜ್ ಮದ್ರಸ ಮ್ಯಾನೇಜ್‌ಮೆಂಟ್ ಅಸೋಸಿಯೇಷನ್‌ನ ಪ್ರಧಾನ ಕಾರ್ಯದರ್ಶಿ ಶಬೀರ್ ಅಹ್ಮದ್ ಅಂಗರಕರಿಯ ಧನ್ಯವಾದಗೈದರು. ಕಾರ್ಯಕ್ರಮದ ಸಂಘಟಕ ಅಸ್ಪರ್ ಹುಸೈನ್ ಕಾರ್ಯಕ್ರಮ ನಿರೂಪಿಸಿದರು.