ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ
Update: 2016-11-29 20:53 IST
ಕಾರ್ಕಳ,ನ.29 : ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಧಾರವಾಡದಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ನಿಟ್ಟ್ಟೆ ವಿದ್ಯಾಸಂಸ್ಥೆಯ ಡಾ ಎನ್‌ಎಸ್‌ಎಎಮ್ ಹೈಸ್ಕೂಲ್ ವಿದ್ಯಾರ್ಥಿ ದಿನೇಶ 800 ಮೀ ಮತ್ತು 1500 ಮೀ ಓಟದಲ್ಲಿ ಚಿನ್ನದ ಪದಕ ಹಾಗೂ 3000 ಮೀ ಓಟದಲ್ಲಿ ಬೆಳ್ಳಿಯ ಪದಕ ಗಳಿಸಿ ರಾಜ್ಯಮಟ್ಟದಲ್ಲಿ ವೈಯಕ್ತಿಕ ಚಾಂಪಿಯನ್‌ಶಿಪ್ ಗಳಿಸಿ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾನೆ.