×
Ad

ಮರಳು ಹರಾಜು ಅನಿರ್ದಿಷ್ಟಾವಧಿಗೆ ಮುಂದೂಡಿಕೆ

Update: 2016-11-29 22:10 IST

ಉಡುಪಿ, ನ.29: ಹಂಗಾರಕಟ್ಟೆ ವಾಟರ್‌ಶಿಪ್ ಯಾರ್ಡ್‌ನಲ್ಲಿ ಅಕ್ರಮವಾಗಿ ಯಂತ್ರ ಬಳಸಿ ದಾಸ್ತಾನು ಇರಿಸಿದ್ದ ಮರಳನ್ನು ಬ್ರಹ್ಮಾವರ ವಿಶೇಷ ತಹಶೀಲ್ದಾರರು ಹಾಗೂ ಅಧೀನ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡು ಆ ಮರಳನ್ನು ಇಲಾಖೆಯ ಸುಪರ್ದಿಗೆ ನೀಡಿದ್ದಾರೆ.

ವಶಪಡಿಸಿಕೊಂಡ ಮರಳನ್ನು ನ.28ರಂದು ಹರಾಜು ಮಾಡಲು ಅಧಿ ಸೂಚನೆ ಹೊರಡಿಸಲಾಗಿತ್ತು. ಆದರೆ ಈ ಬಗ್ಗೆ ಈಗಾಗಲೇ ಉಚ್ಚ ನ್ಯಾಯಾಲಯದಲ್ಲಿ ರಿಟ್ ಇರುವುದರಿಂದ ನ್ಯಾಯಾಲಯವು ಜಿಲ್ಲಾಧಿಕಾರಿ ಗಳಿಗೆ ತನಿಖೆ ನಡೆಸಲು ಆದೇಶಿಸಿದೆ.

ಹೀಗಾಗಿ ಮರಳು ಹರಾಜು ಪ್ರಕ್ರಿಯೆ ಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ ಎಂದು ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News