ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2016-11-29 16:55 GMT

 ಉಡುಪಿ, ನ.29: 2016-17ನೇ ಸಾಲಿನಲ್ಲಿ ನಡೆಯುವ ಅಂತಾರಾಷ್ಟೀಯ ಮಹಿಳಾ ದಿನಾಚರಣೆಯ ಸಂದರ್ದಲ್ಲಿ ನೀಡಲಾಗುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗಾಗಿ ಉಡುಪಿ ಜಿಲ್ಲೆಯಿಂದ ಕಳೆದ 5 ವರ್ಷಗಳಿಂದ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಅವಿರತವಾಗಿ ಸೇವೆ ಸಲ್ಲಿಸುತ್ತಿರುವ ಅರ್ಹ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಅರ್ಹ ವ್ಯಕ್ತಿಗಳಿಗೆ ಮತ್ತು ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಮಹಿಳೆಯರಿಂದ ಹಾಗೂ ವೀರ ಮಹಿಳೆ ಪ್ರಶಸ್ತಿಗೆ ಅರ್ಹರಿರುವ ಮಹಿಳೆಯರಿಂದ ಪ್ರಸ್ತಾವನೆಗಳನ್ನು ನಿಗದಿತ ನಮೂನೆಯಲ್ಲಿ ಆಹ್ವಾನಿಸಲಾಗಿದೆ.

ಪ್ರಸ್ತಾವನೆಗಳನ್ನು ಜಿಲ್ಲಾ ಉಪನಿರ್ದೇಶಕರಿಗೆ ಸಲ್ಲಿಸಲು ಅಂತಿಮ ದಿನಾಂಕ ಡಿ.15 ಆಗಿದೆ. ಆಸಕ್ತ ಮಹಿಳೆಯರು ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಜತಾದ್ರಿ, ‘ಬಿ’ ಬ್ಲಾಕ್, ಕೊಠಡಿ ಸಂಖ್ಯೆ 204, ಮೊದಲನೆ ಮಹಡಿ, ಮಣಿಪಾಲ (ದೂರವಾಣಿ:0820-2574928) ಇವರನ್ನು ಸಂಪರ್ಕಿ ಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News