×
Ad

ಏಡ್ಸ್ ಅರಿವು ಕಾರ್ಯಕ್ರಮ

Update: 2016-11-29 22:58 IST

ಉಡುಪಿ, ನ.29: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಪರ್ಯಾಯ ಪೇಜಾವರ ಮಠ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಕಲಾದರ್ಶಿನಿ ಯಕ್ಷಗಾನ ಮಂಡಳಿ ಬೆಂಗಳೂರು ಇವರಿಂದ ಏಡ್ಸ್ ಬಗ್ಗೆ ಅರಿವು ಮೂಡಿಸುವ ಯಕ್ಷಗಾನವನ್ನು ನ.30ರಂದು 4:00ರಿಂದ 5:30ರವರೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪರ್ಯಾಯ ಶ್ರೀ ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವೇಶ್ವತೀರ್ಥ ಶ್ರೀಪಾದರು ಭಾಗವಹಿಸಲಿರುವರು.

ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಉಡುಪಿ ಸಭಾಪತಿ ಡಾ.ಉಮೇಶ್ ಪ್ರು, ಉಪಸಭಾಪತಿ ಡಾ.ಅಶೋಕ್ ಕುಮಾರ್ ವೈ.ಜಿ, ಕಾರ್ಯದರ್ಶಿ ಜೆ. ಸಿ.ಜನಾರ್ದನ್, ರೆಡ್‌ಕ್ರಾಸ್ ಸಂಸ್ಥೆ ಕರ್ನಾಟಕ ರಾಜ್ಯ ಶಾಖೆಯ ಬಸ್ರೂರು ರಾಜೀವ ಶೆಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಉದ ಡಾ.ರೋಹಿಣಿ ಉಪಸ್ಥಿತರಿರುವರು.

ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News