ಆಳ್ವಾಸ್‌ನ ನಿರ್ಮಲಾ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆ
Update: 2016-11-29 23:09 IST
ಮೂಡುಬಿದಿರೆ, ನ.29 : ಕರ್ನಾಟಕ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ರಾಮನಗರ ಜಿಲ್ಲೆಯಲ್ಲಿ ನಡೆಸಿದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ನಿರ್ಮಲಾ ಸುಭಾಸ್ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ