ದಿಲ್ಲಿ ಬಿಜೆಪಿ ಅಧ್ಯಕ್ಷರಾಗಿ ಮನೋಜ್ ತಿವಾರಿ
Update: 2016-11-30 12:17 IST
ಹೊಸದಿಲ್ಲಿ, ನ.30:ಲೋಕಸಭಾ ಸದಸ್ಯ ಮನೋಜ್ ತಿವಾರಿ ದಿಲ್ಲಿ ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ಹಾಲಿ ಅಧ್ಯಕ್ಷ ಸತೀಶ್ ಉಪಾಧ್ಯಾಯ ಅವರನ್ನು ಅಧ್ಯಕ್ಷ ಹುದ್ದೆಯಿಂದ ಕೆಳಗಿಳಿಸಿ ಮನೋಜ್ ತಿವಾರಿ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಬಿಜೆಪಿ ಎಂಪಿ ನಿತ್ಯಾನಂದ ರಾಯ್ ಅವರನ್ನು ಇದೇ ಸಂದರ್ಭದಲ್ಲಿ ಬಿಹಾರದ ಬಿಜೆಪಿ ಅಧ್ಯಕ್ಷರಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇಮಕ ಮಾಡಿದ್ದಾರೆ.