ಚಿತ್ರ ಮಂದಿರಗಳಲ್ಲಿ ಚಿತ್ರ ಪ್ರದರ್ಶನಕ್ಕೂ ಮುನ್ನ ರಾಷ್ಟ್ರಗೀತೆ ಕಡ್ಡಾಯ: ಸುಪ್ರೀಂ ಕೋರ್ಟ್
Update: 2016-11-30 13:10 IST
ಹೊಸದಿಲ್ಲಿ, ನ.30: ದೇಶದ ಚಿತ್ರ ಮಂದಿರಗಳಲ್ಲಿ ಸಿನಿಮಾ ಪ್ರದರ್ಶನ ಆರಂಭಗೊಳ್ಳುವ ಮುನ್ನ ರಾಷ್ಟ್ರಗೀತೆ ನುಡಿಸಬೇಕು ಎಂದು ಸುಪ್ರೀಂ ಕೋರ್ಟ್ ಇಂದು ಮಹತ್ವದ ಆದೇಶ ನೀಡಿದೆ.
ಶ್ಯಾಂ ನಾರಾಯಣ್ ಚೌಸ್ಕಿ ಎಂಬುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದ್ದು, ರಾಷ್ಟ್ರಗೀತೆ ಮತ್ತು ರಾಷ್ಟ್ರ ಧ್ಜಜಕ್ಕೆ ಗೌರವ ನೀಡಬೇಕಾಗಿರುವುದು ದೇಶದ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಹೇಳಿದೆ.
ರಾಷ್ಟ್ರಗೀತೆ ಮತ್ತು ರಾಷ್ಟ್ರ ಧ್ಜಜಕ್ಕೆ ಗೌರವ ನೀಡುವುದು ದೇಶಭಕ್ತಿ ಹಾಗೂ ರಾಷ್ಟ್ರೀಯತೆಗೆ ಸಂಬಂಧಿಸಿದ ವಿಚಾರವಾಗಿದೆ. ಯಾವುದೇ ಕಾರಣಕ್ಕೂ ಇದಕ್ಕೆ ಅವಮಾನ ಮಾಡಬಾರದು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ
ಇದೇ ವೇಳೆ ವಾಣಿಜ್ಯ ಉದ್ದೇಶಗಳಿಗೆ ರಾಷ್ಟ್ರಧ್ವಜವನ್ನಾಗಲೀ ಅಥವಾ ರಾಷ್ಟ್ರಗೀತೆಯನ್ನಾಗಲಿ ಬಳಸಿಕೊಳ್ಳಬಾರದು ಎಂದು ಎಚ್ಚರಿಕೆ ನೀಡಿದೆ.
2003ರಲ್ಲಿ ಮಹಾರಾಷ್ಟ್ರ ಸರಕಾರ ಚಲನಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯಗೊಳಿಸಿತ್ತು