×
Ad

ಅಕ್ಷಯ್ ಅಮರ್ ರಹೇ..!

Update: 2016-12-01 23:52 IST

ಜಮ್ಮು ಕಾಶ್ಮೀರದ ನಗ್ರೋಟಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಬೆಂಗಳೂರಿನ ಮೇಜರ್ ಅಕ್ಷಯ್ ಗಿರೀಶ್‌ಕುಮಾರ್(31) ಅವರ ಪಾರ್ಥಿವ ಶರೀರವನ್ನು ಗುರುವಾರ ಬೆಳಗ್ಗೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಯಲಹಂಕದ ವಾಯು ನೆಲೆಗೆ ತರಲಾಯಿತು. ಈ ವೇಳೆ ಸೇನೆಯ ಹಿರಿಯ ಅಧಿಕಾರಿಗಳು, ಸಚಿವರು, ಪ್ರಮುಖ ಗಣ್ಯರು ಅಗಲಿದ ವೀರಯೋಧ ಅಕ್ಷಯ್ ಅವರಿಗೆ ಅಂತಿಮ ನಮನ ಸಲ್ಲಿಸಿದರು. ಸಾವಿರಾರು ಜನರ ಸಮ್ಮುಖದಲ್ಲಿ ಮೆರವಣಿಗೆ ಮೂಲಕ ಸಾಗಿ ಬಳಿಕ ಹೆಬ್ಬಾಳದ ಚಿರಶಾಂತಿ ವಿದ್ಯುತ್ ಚಿತಾಗಾರದಲ್ಲಿ ಅಕ್ಷಯ್ ಅವರ ಅಂತ್ಯಕ್ರಿಯೆ ನಡೆಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor