×
Ad

82ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ..!!

Update: 2016-12-02 23:52 IST

82ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ರಾಯಚೂರಿನಲ್ಲಿ ಉದ್ಘಾಟಿಸಿದರು. ಸಮ್ಮೇಳನಾಧ್ಯಕ್ಷ ಬರಗೂರು ರಾಮಚಂದ್ರಪ್ಪ, ಸಚಿವರಾದ ಉಮಾಶ್ರೀ, ತನ್ವೀರ್ ಸೇಠ್ ಮತ್ತಿತರರು ಉಪಸ್ಥಿತರಿದ್ದರು. ಇದಕ್ಕೂ ಮೊದಲು ಸಮ್ಮೇಳನಾಧ್ಯಕ್ಷ ಬರಗೂರು ರಾಮಚಂದ್ರಪ್ಪ ಅವರನ್ನು ಮೆರವಣಿಗೆಯ ಮೂಲಕ ಸಮ್ಮೇಳನ ನಗರಿಗೆ ಅದ್ದೂರಿಯಾಗಿ ಕರೆಯಲಾಯಿತು. ಮೆರವಣಿಗೆಯಲ್ಲಿ 3500 ಅಡಿ ಉದ್ದದ ಕನ್ನಡ ಧ್ವಜವನ್ನು ಹಿಡಿದುಕೊಂಡು ಸಾವಿರಾರು ಕನ್ನಡಾಭಿಮಾನಿಗಳು ಸಾಗಿ ಬಂದ ದೃಶ್ಯ ಆಕರ್ಷಕವಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor