ಅಕ್ಷರ ಜಾತ್ರೆಗೆ ಹರಿದು ಬಂದ ಜನಸಾಗರ

Update: 2016-12-02 18:34 GMT

ರಾಯಚೂರು,ಡಿ.2: ಎಡದೊರೆ ನಾಡು ರಾಯಚೂರಿನಲ್ಲಿ ನಡೆಯು ತ್ತಿರುವ 82ನೆ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ನಿರೀಕ್ಷೆಗೂ ಮೀರಿ ಜನ ಸಾಗರ ಹರಿದು ಬಂತು.


ಬೆಳಗ್ಗೆ 8 ಗಂಟೆಯಿಂದಲೇ ಸ್ಥಳೀಯ ನಾಗರಿಕರು, ಮಹಿಳೆಯರು, ವಿದ್ಯಾ ರ್ಥಿಗಳು ಸಾಹಿತ್ಯ ಸಮ್ಮೇಳನವನ್ನು ಕಣ್ಮನ ತುಂಬಿಕೊಳ್ಳಲು ತಂಡೋಪ ತಂಡವಾಗಿ ಆಗಮಿಸಿದರು. ರಾಜ್ಯದ ನಾನಾ ಜಿಲ್ಲೆಗಳಿಂದ ಕನ್ನಡಾಭಿಮಾನಿ ಗಳು, ಸಾಹಿತಿಗಳು, ಸಾಹಿತ್ಯಾಸಕ್ತರು ಗುರುವಾರವೇ ನಗರಕ್ಕೆ ಆಗಮಿಸಿದರು. ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ ಪ್ರತಿನಿಧಿಗಳಿಗೆ ವಸತಿ ವ್ಯವಸ್ಥೆ ಜಿಲ್ಲಾಡಳಿತ ಮಾಡಿದ್ದು, ಸಮ್ಮೇಳನದ ಬಗ್ಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದರು.
ಮೆರವಣಿಗೆಯಲ್ಲಿ ಹಾಗೂ ಮುಖ್ಯವೇದಿಕೆಯಲ್ಲಿ ಜನಸಾಗರ ಜಮಾ ಯಿಸಿದ್ದ ಕಾರಣ ಯಾವುದೇ ವಾಹನಗಳನ್ನು ಲಿಂಗಸೂಗೂರು ರಸ್ತೆ ಹೆದ್ದಾರಿಯಲ್ಲಿ ಸಂಚಾರವನ್ನು ಸಂಪೂರ್ಣ ನಿಷೇಧಿಸಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯಬಾರದೆಂಬ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಪೊಲೀಸ್ ಇಲಾಖೆ ಭಾರೀ ಬಿಗಿ ಬಂದೋಬಸ್ತ್ ಕೈಗೊಂಡಿದೆ. ಒಟ್ಟು 1,800 ಪೊಲೀಸ್ ಸಿಬ್ಬಂದಿಯನ್ನು ಸಾಹಿತ್ಯ ಸಮ್ಮೇಳನಕ್ಕೆ ನಿಯೋಜಿಸ ಲಾಗಿದೆ. ಜಿಲ್ಲೆಯ ಪ್ರತೀ ತಾಲೂಕಿಗೆ ತಲಾ 3 ಬಸ್ ಸೌಕರ್ಯವನ್ನು ಉಚಿತವಾಗಿ ಮಾಡಿರುವುದರಿಂದ ತಾಲೂಕುಗಳಿಂದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದರು.
ರಾಯಚೂರು ನಗರದಲ್ಲಿ 10 ನಗರ ಸಾರಿಗೆ ಬಸ್ ಉಚಿತವಾಗಿ ಬಿಟ್ಟಿರುವುದರಿಂದ ನಗರದ ಜನತೆಯೂ ಸಹಸ್ರಾರು ಸಂಖ್ಯೆಯಲ್ಲಿ ಭಾಗವ ಹಿಸಿದ್ದರು. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಹಿನ್ನೆಲೆಯಲ್ಲಿ ನಗರ ಸೇರಿದಂತೆ ಜಿಲ್ಲೆಯ ಬಹುತೇಕ ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿರುವುದು ಕಂಡು ಬಂದಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಮ್ಮೇಳನದ ಸರ್ವಾಧ್ಯಕ್ಷರು ವೇದಿಕೆಗೆ ಆಗಮಿಸುತ್ತಿದ್ದಂತೆ ಅಭೂತಪೂರ್ವ ಸ್ವಾಗತ ಕೋರಲಾಯಿತು.
ಸಾಹಿತ್ಯ ಸಮ್ಮೇಳನವನ್ನು 12:30ರ ಸುಮಾರಿಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ನೆರವೇರಿಸಿದರು. ವೇದಿಕೆಯಲ್ಲಿ ಗಣ್ಯರು, ಅತಿಥಿಗಳ ಭಾಷಣವನ್ನು ನೆರೆದಿದ್ದ ಜನ ಸಾಗರವು ಅತ್ಯಂತ ಸಂಯಮದಿಂದ ಕೇಳಿದರು. ಪುಸ್ತಕಗಳನ್ನು ಖರೀದಿಸಲು ಜನರು ಮುಗಿಬಿದ್ದಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News