ಪೊಲ್ವಾಟ್ ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡ ರಯ್ಯೆನ್ ಶೇಕ್ ಗೆ ಸನ್ಮಾನ
Update: 2016-12-03 18:30 IST
ಭಟ್ಕಳ,ಡಿ.3: ಇತ್ತಿಚೆಗೆ ಧಾರವಾಡದಲ್ಲಿ ನಡೆದ ರಾಜ್ಯಮಟ್ಟದ ಅಥ್ಲೆಟಿಕ್ಸ್ ನಲ್ಲಿ ಇಲ್ಲಿನ ಇಸ್ಲಾಮಿಯಾ ಆಂಗ್ಲೋ ಉರ್ದು ಪ್ರೌಢಶಾಲೆಯ ವಿದ್ಯಾರ್ಥಿ ರಯ್ಯಾನ್ ಶೇಖ್ ಪೋಲ್ವಾಟ್ ನಲ್ಲಿ ಪ್ರಥಮ ಸ್ಥಾನಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡ ಹಿನ್ನೆಲೆಯಲ್ಲಿ ಶನಿವಾರ ನಡೆದ ವಿಭಾಗೀಯ ಮಟ್ಟದ ಥ್ರೋಭಾಲ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಜಿ.ಪಂ.ಅಧ್ಯಕ್ಷೆ ಜಯಶ್ರೀ ಮೊಗೇರ್ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಪನಿರ್ದೇಶಕ ರಾಮಕೃಷ್ಣ ನಾಯ್ಕ, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ಪಟಗಾರ, ಜಿ.ಪಂ.ಸದಸ್ಯೆ ಸಿಂಧೂ ಭಾಸ್ಕರ್ ನಾಯ್ಕ, ತಾ.ಪಂ ಉಪಾಧ್ಯಕ್ಷೆ ರಾಧಾ ವೈದ್ಯ, ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲ ಈಶ್ವರ್ ನಾಯ್ಕ, ತಾ.ಪಂ.ಸ್ಥಾಯಿಸಮಿತಿ ಅಧ್ಯಕ್ಷ ವಿಷ್ಣುದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು.