ನ್ಯಾಯಾಂಗದ ಮೇಲಿನ ನಂಬಿಕೆ ಉಳಿಸುವ ಜವಾಬ್ದಾರಿ ವಕೀಲರದ್ದು : ಹೈಕೋರ್ಟ್ ನ್ಯಾಯಮೂರ್ತಿ ಆನಂದ ಬೈರಾರೆಡ್ಡಿ

Update: 2016-12-03 16:51 GMT

ಉಡುಪಿ, ಡಿ.3: ಕಕ್ಷಿದಾರರು ನ್ಯಾಯಾಂಗದ ಮೇಲೆ ಸಾಕಷ್ಟು ನಂಬಿಕೆ ಹಾಗೂ ವಿಶ್ವಾಸವನ್ನು ಇಟ್ಟುಕೊಂಡಿದ್ದು, ಅದನ್ನು ಉಳಿಸುವ ಬಹಳ ದೊಡ್ಡ ಜವಾಬ್ದಾರಿ ವಕೀಲರ ಮೇಲಿದೆ. ಕಕ್ಷಿದಾರರ ನಿರೀಕ್ಷೆಯಂತೆ ಆದಷ್ಟು ಶೀಘ್ರ ವಾಗಿ ಪ್ರಕರಣವನ್ನು ಇತ್ಯರ್ಥ ಮಾಡುವ ನಿಟ್ಟಿನಲ್ಲಿ ಎಲ್ಲ ವಕೀಲರು ಪ್ರಯತ್ನಿ ಸಬೇಕು ಎಂದು ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿ ಆನಂದ ಬೈರಾ ರೆಡ್ಡಿ ಹೇಳಿದ್ದಾರೆ.

ಉಡುಪಿ ವಕೀಲರ ಸಂಘದ ವತಿಯಿಂದ ಉಡುಪಿ ನ್ಯಾಯಾಲಯ ಸಂಕೀರ್ಣ ಆವರಣದಲ್ಲಿ ಶನಿವಾರ ಆಯೋಜಿಸಲಾದ ವಕೀಲರ ದಿನಾ ಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

 ವಕೀಲರ ಸಂಘದಿಂದ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಸಾಧ್ಯ. ಆ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಬೇಕು. ಸಮಾಜದ ಬದಲಾಣೆ ಯಲ್ಲಿ ವಕೀಲರ ಪಾತ್ರ ಬಹಳ ದೊಡ್ಡದು. ಮೊದಲು ಅದನ್ನು ಅರಿತುಕೊಳ್ಳ ಬೇಕು. ಭಾರತದ ಮೊದಲ ರಾಷ್ಟ್ರಪತಿ ಡಾ.ಬಾಬು ರಾಜೇಂದ್ರ ಪ್ರಸಾದ್ ಹುಟ್ಟುಹಬ್ಬವನ್ನು ವಕೀಲರ ದಿನವನ್ನಾಗಿ ಆಚರಿಸಲಾಗುತ್ತದೆ. ಭಾರತದ ಸ್ವಾತಂತ್ರ ಹೋರಾಟದಲ್ಲಿ ಅನೇಕ ವಕೀಲರು ಪಾಲ್ಗೊಂಡಿದ್ದರು ಎಂದರು. ಅನುದಾನದ ಅಧಾರದಲ್ಲಿ ಕಾಲ ಕಾಲಕ್ಕೆ ನ್ಯಾಯಾಲಯಗಳ ಆಧುನಿಕರಣ ಹಾಗೂ ಮೂಲಭೂತ ಸೌಕರ್ಯ ಒದಗಿಸುವ ಕಾರ್ಯ ಆಗುತ್ತಿದ್ದು, ಈ ಕಾರ್ಯದ ಮೇಲುಸ್ತುವಾರಿಯನ್ನು ಸುಪ್ರೀಂ ಕೋರ್ಟ್ ವಹಿಸಿಕೊಂಡಿದೆ. ರಾಜ್ಯದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳ ವರದಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗುತ್ತಿದೆ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ವಕೀಲರ ಸಂಘದ ಗ್ರಂಥಾಲಯ ಆಧುನೀಕರಣಕ್ಕೆ ನ್ಯಾಯವಾದಿ ಹಾಗೂ ಕರ್ನಾಟಕ ರಾಜ್ಯ ಕೈಗಾರಿಕೆ ಮತ್ತು ಮೂಲಭೂತ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಿ.ಎಂ.ಧನಂಜಯ 5 ಲಕ್ಷ ರೂ. ದೇಣಿಗೆಯನ್ನು ನೀಡಿದರು. ಅಧ್ಯಕ್ಷತೆಯನ್ನು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಜಶೇಖರ್ ವಿ.ಪಾಟೀಲ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ರಾಜ್ಯ ವಕೀಲರ ಪರಿಷತ್‌ನ ಉಪಾಧ್ಯಕ್ಷ ಸುಭಾಷ್ ಕೌಡಿಚರ್ ಮಾತನಾಡಿದರು. ಉಡುಪಿ ವಕೀಲರ ಸಂಘದ ಅಧ್ಯಕ್ಷ ಕೆ.ದಯಾನಂದ ಸ್ವಾಗತಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ರೆನೋಲ್ಡ್ ಪ್ರವೀಣ್ ಕುಮಾರ್ ವಂದಿಸಿದರು. ಡ ಸದಸ್ಯ ಕೇಶವ ಸನಿಲ್, ನಝೀರ್ ಬಜಾಲ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News