ಅಲ್ ಇಹ್ಸಾನ್ ಮಹಿಳಾ ಕಾಲೇಜು ಕಟ್ಟಡ ಉದ್ಘಾಟನೆ

Update: 2016-12-04 16:30 GMT

ಕಾಪು, ಡಿ.4: ಮೂಳೂರು ಅಲ್ ಇಹ್ಸಾನ್ ಮಹಿಳಾ ಕಾಲೇಜಿನ ನೂತನ ಕಟ್ಟಡದ ಉದ್ಘಾಟನೆಯನ್ನು ಮಾಜಿ ಕೇಂದ್ರ ಸಚಿವ ಹಾಗೂ ಹಾಲಿ ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ರವಿವಾರ ನೆರವೇರಿಸಿದರು.

ಗಲ್ಫ್ ರಾಷ್ಟ್ರಗಳಲ್ಲಿ ದುಡಿದು ಮಹಿಳೆಯರ ಶಿಕ್ಷಣಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ವಿದ್ಯಾ ಸಂಸ್ಥೆಯನ್ನು ಸ್ಥಾಪಿಸಿರುವುದು ಶ್ಲಾಘನೀಯ. ಡಿಕೆಎಸ್‌ಸಿ ಇಡೀ ಸಮಾಜಕ್ಕೆ ಮಾದರಿಯಾಗಿರುವ ಸಂಸ್ಥೆಯಾಗಿ ಮೂಡಿಬರುತ್ತಿದೆ. ಮುಂದಿನ ದಿನಗಳಲ್ಲಿ ಸಂಸ್ಥೆಗೆ ಬೇಕಾದ ಎಲ್ಲ ರೀತಿಯ ಸಹಕಾರ ನೀಡಲು ಬದ್ಧ ಎಂದು ಆಸ್ಕರ್ ಫೆರ್ನಾಂಡಿಸ್ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮುಸ್ಲಿಮ್ ಸಮುದಾಯದ 30 ಬಡ ಹೆಣ್ಣು ಮಕ್ಕಳಿಗೆ ಸ್ವಉದ್ಯೋಗಕ್ಕಾಗಿ ಹೊಲಿಗೆ ಯಂತ್ರವನ್ನು ವಿತರಿಸಲಾಯಿತು.

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಶಾಸಕರಾದ ವಿನಯ ಕುಮಾರ್ ಸೊರಕೆ, ಮೊಹಿದೀನ್ ಬಾವ ಮಾತನಾಡಿದರು.

ಅಲ್ಪಸಂಖ್ಯಾತ ಅಭಿವೃದ್ದಿ ನಿಗಮದ ಅಧ್ಯಕ್ಷ ಎಂ.ಎ.ಗಫೂರ್, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಯೇನಪೋಯ ವಿವಿಯ ಕುಲಪತಿ ಯೇನಪೋಯ ಅಬ್ದುಲ್ ಕುಂಞಿ, ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಎಸ್.ಎಂ.ರಶೀದ್ ಹಾಜಿ, ಬ್ಲೋಸಂ ಫೆರ್ನಾಂಡಿಸ್, ಚಾರ್ಟೆಡ್ ಅಕೌಂಟ್ ಅಬ್ದುಲ್ ಸಮದ್, ಅಝೀಝ್ ಹೆಜಮಾಡಿ, ಹಾಜಿ ಝಕ ರಿಯಾ ಜೋಕಟ್ಟೆ, ಉಳ್ಳಾಲ ದರ್ಗಾ ಅಧ್ಯಕ್ಷ ರಶೀದ್ ಹಾಜಿ, ಉಡುಪಿ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಯಹ್ಯಾ ನಖ್ವಾ, ಕಾಲೇಜಿನ ಪ್ರಾಂಶುಪಾಲ ಹಬೀಬುರ್ರಹ್ಮಾನ್ ಉಪಸ್ಥಿತರಿದ್ದರು.

 ಸ್ವಾಗತ ಸಮಿತಿಯ ಅಧ್ಯಕ್ಷ ಅಲ್‌ಹಾಜ್ ಬಿ.ಎಂ.ಮುಮ್ತಾಝ್ ಅಲಿ ಕೃಷ್ಣಾಪುರ ಸ್ವಾಗತಿಸಿದರು.

ಮರ್ಕಝ್ ತಅ್ಲೀಮಿಲ್ ಇಹ್ಸಾನ್ ಮ್ಯಾನೇಜರ್ ಯು.ಕೆ.ಮುಸ್ತಫಾ ಸಅದಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ರಫೀಕ್ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News