ರೈಲಿನಲ್ಲಿ ಅಕ್ರಮ ಮದ್ಯ ವಶ
Update: 2016-12-04 23:13 IST
ಕಾರವಾರ, ಡಿ.4: ಕುರ್ಲಾ-ಮತ್ಸ್ಯಗಂಧ ರೈಲುಗಳಲ್ಲಿ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ವಾರಸುದಾರರಿಲ್ಲದ ಗೋವಾದ ಅಕ್ರಮ ಮದ್ಯದ ಬಾಟಲಿಗಳನ್ನು ರೈಲ್ವೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರೈಲ್ವೆ ಪೊಲೀಸರು ರೈಲಿನಲ್ಲಿ ತಪಾಸಣೆ ನಡೆಸುತ್ತಿರುವ ಸಂದರ್ಭದಲ್ಲಿ ಚೀಲದಲ್ಲಿ ಗೋವಾದ ವಿವಿಧ ಬ್ರಾಂಡ್‌ಗೆ ಸೇರಿದ 460 ಬಾಟಲಿಗಳ 19 ಸಾವಿರ ರೂ. ಮೌಲ್ಯದ ಅಕ್ರಮ ಸಾರಾಯಿ ವಶಕ್ಕೆ ಪಡೆದುಕೊಂಡಿದ್ದಾರೆ.
ವಶಕ್ಕೆ ಪಡೆದುಕೊಂಡಿದ್ದ ಅಕ್ರಮ ಮದ್ಯವನ್ನು ಅಬಕಾರಿ ಇಲಾಖೆಯ ಅಧಿಕಾರಿಗಳ ವಶಕ್ಕೆ ನೀಡಲಾಗಿದೆ ಎಂದು ಕೊಂಕಣ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.