ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪೇದೆಯ ಲಂಚ ಸ್ವೀಕಾರದ ವೀಡಿಯೊ

Update: 2016-12-04 18:33 GMT

ಮಂಗಳೂರು, ಡಿ.4: ಅಕ್ರಮ ಮರಳು ಸಾಗಾಟದಾರರಿಂದ ಬಜ್ಪೆ ಪೊಲೀಸ್ ಠಾಣಾ ಪೊಲೀಸರೊಬ್ಬರು ಲಂಚ ಸ್ವೀಕರಿಸುತ್ತಿರುವ ವೀಡಿಯೊವೊಂದು ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ವಿಚಾರಣೆ ನಡೆಸಲು ಹಿರಿಯ ಅಧಿಕಾರಿಗಳು ಠಾಣಾಧಿಕಾರಿಗೆ ಸೂಚಿಸಿದ್ದಾರೆ.

ಪೊಲೀಸ್ ಸಿಬ್ಬಂದಿಯೊಬ್ಬರು ರಸ್ತೆ ಬದಿಯಲ್ಲಿ ನಿಂತು ಲಾರಿಗಳನ್ನು ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಮರಳು ಲಾರಿಯೊಂದನ್ನು ತಡೆದು ನಿಲ್ಲಿಸಿದ್ದಾರೆ. ಲಾರಿಯ ಚಾಲಕನನ್ನು ಸಮವಸ ಹಾಕಲಿಲ್ಲ ಎಂದು ಸಿಬ್ಬಂದಿ ಆಕ್ಷೇಪಿಸಿದಾಗ ಲಾರಿ ಚಾಲಕ ಲಂಚ ನೀಡಿದಂತೆ ಕಾಣುವ ವೀಡಿಯೊ ತುಣುಕು ರೆಕಾರ್ಡ್ ಆಗಿದೆ. ಈ ವಿಡಿಯೋವನ್ನು ಶನಿವಾರದಿಂದ ವಿವಿಧ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿದೆ. ಇದೀಗ ವೀಡಿಯೊದ ಗಂಭೀರತೆಯನ್ನು ಅರಿತ ಪೊಲೀಸ್ ಹಿರಿಯ ಅಧಿಕಾರಿಗಳು ಸಿಬ್ಬಂದಿಯ ವಿಚಾರಣೆ ನಡೆಸುವಂತೆ ಠಾಣಾಧಿಕಾರಿಗೆ ಸೂಚಿಸಿದ್ದಾರೆ. ತನಿಖೆಯ ಬಳಿಕ ಸತ್ಯಾಂಶ ತಿಳಿದುಬರಲಿದೆ.

ಇತ್ತೀಚೆಗೆ ನಡೆದ ಕಟೀಲು ದರೋಡೆ ಪ್ರಕರಣ, ದನ ಸಾಗಾಟ ಸೇರಿದಂತೆ ಹಲವು ಪ್ರಕರಣದ ಆರೋಪಿಗಳ ಪತ್ತೆಗೆ ಈ ವೀಡಿಯೊ ತುಣುಕಲ್ಲಿ ಕಾಣುವ ಪೊಲೀಸ್ ಸಿಬ್ಬಂದಿ ಉತ್ತಮವಾಗಿ ಕಾರ್ಯ ನಿರ್ವಹಿಸಿ, ಹಿರಿಯ ಅಧಿಕಾರಿಗಳಿಂದ ಪ್ರಶಂಸನಾ ಪತ್ರ ಪಡೆದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News