ಇಂದು ಸಂಜೆ ಐದು ಗಂಟೆಗೆ ಜಯಲಲಿತಾ ಆರೋಗ್ಯದ ಬಗ್ಗೆ ಪ್ರಕಟಣೆ
Update: 2016-12-05 12:45 IST
ಚೆನ್ನೈ, ಡಿ.5: ತೀವ್ರ ಹೃದಯಾಘಾತಕ್ಕೊಳಗಾಗಿ ಚೆನ್ನೈನ ಅಪೋಲೋ ಆಸ್ಪತ್ರೆಯ ಎಂಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯ ಮಂತ್ರಿ ಜಯಲಲಿತಾ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಸೋಮವಾರ ಸಂಜೆ 5 ಗಂಟೆಗೆ ಆಸ್ಪತ್ರೆಯ ವೈದ್ಯರು ಅಧಿಕೃತ ಮಾಹಿತಿ ನೀಡಲಿದ್ದಾರೆ.
ಇಕ್ಮೊ ಯಂತ್ರದ ಮೂಲಕ ಜಯಲಲಿತಾ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಬೆಳಗ್ಗೆ 5 ಗಂಟೆಗೆ ಇಕ್ಮೊ ಮೂಲಕ ವೈದ್ಯರು ಜಯಾಲಲಿತಾ ಅವರಿಗೆ ಚಿಕಿತ್ಸೆ ಆರಂಭಿಸಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ. ಆರೋಗ್ಯದಲ್ಲಿ ಸ್ವಲ್ಪ ಮಟ್ಟಿನ ಚೇತರಿಕೆ ಕಂಡು ಬಂದಿದ್ದರೂ ಹನ್ನೆರಡು ಗಂಟೆಗಳ ಕಾಲ ಅವರ ಆರೋಗ್ಯದ ಬಗ್ಗೆ ಏನನ್ನು ಹೇಳಲು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.