ಡಿ.6ರಂದು ದಮಾಮ್ ನಲ್ಲಿ 'ಮರೆಯದಿರೋಣ..ಭರವಸೆಗಳನ್ನು ಉಳಿಸಿಕೊಳ್ಳೋಣ' ಕಾರ್ಯಕ್ರಮ
Update: 2016-12-05 15:51 IST
ದಮಾಮ್, ಡಿ.5: ಇಂಡಿಯನ್ ಸೋಶಿಯಲ್ ಫೋರಮ್ ಈಸ್ಟರ್ನ್ ಪ್ರೊವಿನ್ಸ್ ಕರ್ನಾಟಕ ರಾಜ್ಯ ಸಮಿತಿಯ ವತಿಯಿಂದ ಡಿ.6 ರಂದು ಮಂಗಳವಾರ ರಾತ್ರಿ 8 ಗಂಟೆಗೆ ದಮಾಮ್ ಹೋಟೆಲ್ ಪ್ಯಾರಗನ್ ಸಭಾಂಗಣದಲ್ಲಿ ಬಾಬರಿ ಮಸ್ಜಿದ್ ಸಂಬಂಧಿಸಿದಂತೆ 'ಡಿಸೆಂಬರ್ 6 ಮರೆಯದಿರೋಣ...ಭರವಸೆಗಳನ್ನು ಉಳಿಸಿಕೊಳ್ಳೋಣ' ಎಂಬ ಸಾರ್ವಜನಿಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಇಂಡಿಯನ್ ಸೋಶಿಯಲ್ ಫೋರಮ್ ಅನಿವಾಸಿ ಭಾರತೀಯರಿಗಾಗಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಅನಿವಾಸಿ ಭಾರತೀಯರು ಹೆಚ್ಚಿನ ಸಂಖ್ಯೆಯಲ್ಲಿ 'ಡಿಸೆಂಬರ್ 6 ಮರೆಯದಿರೋಣ...ಭರವಸೆಗಳನ್ನು ಉಳಿಸಿಕೊಳ್ಳೋಣ' ಎಂಬ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಸಂಘಟಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.