ಮಂಗಳೂರನ್ನು ಸುಂದರ ನಗರವನ್ನಾಗಿಸಲು ಮಂಜೂರಾದ ಮೊತ್ತವೆಷ್ಟು ?

Update: 2016-12-05 13:22 GMT

ಮಂಗಳೂರು, ಡಿ.5: ಮಂಗಳೂರನ್ನು ಸುಂದರ ನಗರವನ್ನಾಗಿಸಲು 135 ಕೋ.ರೂ. ವೆಚ್ಚದಲ್ಲಿ ಯೋಜನೆಯನ್ನು ಮಂಜೂರು ಮಾಡಲಾಗುತ್ತಿದೆ ಎಂದು ಶಾಸಕ ಜೆ.ಆರ್.ಲೋಬೊ ತಿಳಿಸಿದರು.

ಉರ್ವ ಮಾರಿಗುಡಿ ದ್ವಾರದಿಂದ ಉರ್ವ ಮಾರುಕಟ್ಟೆ ವೃತ್ತದವರಗೆ ಸುಮಾರು 1.25 ಕೋ.ರೂ. ಕಾಮಗಾರಿಗೆ ಸೋಮವಾರ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡುತ್ತಿದ್ದರು.

ಮಂಗಳೂರು ನಗರವನ್ನು ಅಭಿವೃದ್ಧಿಗೊಳಿಸುವ ವಿಚಾರದಲ್ಲಿ ರಾಜಕೀಯಬೇಡ. ಪಕ್ಷವನ್ನು ಮರೆತು ಬೆಳೆಯುತ್ತಿರುವ ನಗರಗಳಲ್ಲಿ ಮಂಗಳೂರು ಮುಂಚೂಣಿಯಲ್ಲಿ ಬರಬೇಕು ಎನ್ನುವುದು ಮುಖ್ಯವಾಗಿದೆ. ಪ್ರವಾಸೋದ್ಯಮ ವಿಚಾರದಲ್ಲಿ ಸಾಕಷ್ಟು ಪ್ರಗತಿ ಸಾಧಿಸಬೇಕಾಗಿದೆ. ಈ ರಸ್ತೆ ನಿರ್ಮಾಣ ಪೂರ್ತಿಯಾದರೆ ಸುಲ್ತಾನ್‌ಬತ್ತೇರಿಗೂ ಹೋಗಲು ಅನುಕೂಲವಾಗುತ್ತದೆ ಎಂದು ಜೆ.ಆರ್.ಲೋಬೊ ನುಡಿದರು.

ಸಮಾರಂಭದಲ್ಲಿ ಮನಪಾ ಉಪಮೇಯರ್ ಸುಮಿತಾ ಕರಿಯ, ಮನಪಾ ಮುಖ್ಯಸಚೇತಕ ಶಶಿಧರ್ ಹೆಗ್ಡೆ, ಮನಪಾ ಸ್ಥಾಯಿ ಸಮಿತಿ ಅಧ್ಯಕ್ಷ ಲ್ಯಾನ್ಸ್ ಲಾಟ್ ಪಿಂಟೊ, ಕಾರ್ಪೊರೇಟರ್ ರಾಧಾಕೃಷ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಕುಮಾರ್‌ದಾಸ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಮಿತಾ ರಾವ್, ಕೆಎಸ್ಸಾರ್ಟಿಸಿ ನಿರ್ದೇಶಕ ಟಿ.ಕೆ. ಸುಧೀರ್, ನಗರಪಾಲಿಕೆ ಇಂಜಿನಿಯರ್ ಲಿಂಗೇಗೌಡ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News