ಕಾರು ಢಿಕ್ಕಿ: ಪಾದಚಾರಿ ಮೃತ್ಯು
Update: 2016-12-05 23:57 IST
ಕಾಸರಗೋಡು, ಡಿ.5: ಕಾರು ಢಿಕ್ಕಿ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಆರಿಕ್ಕಾಡಿಯಲ್ಲಿ ನಡೆದಿದೆ.
ಮೃತಪಟ್ಟವರನ್ನು ಶಬರಿಮಲೆ ಯಾತ್ರಾರ್ಥಿ ತುಮಕೂರು ಚಿಕ್ಕನಾಯಕ ಹಳ್ಳಿಯ ಸತೀಶ್‌ನಾರಾಯಣ (55)ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಆರಿಕ್ಕಾಡಿ ಹನುಮಾನ್ ಕ್ಷೇತ್ರದ ಸಮೀಪ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಕಾಸರಗೋಡಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಬಿಟ್ಟು ಕೊಡಲಾಯಿತು ಎಂದು ತಿಳಿದು ಬಂದಿದೆ.