ಸುಪ್ರೀಂ ಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿ ನೇಮಕ
Update: 2016-12-06 19:50 IST
ಹೊಸದಿಲ್ಲಿ, ಡಿ.6: ಸುಪ್ರೀಂ ಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಜಗದೀಶ್ ಸಿಂಗ್ ಖೇಹರ್ ನೇಮಕಗೊಂಡಿದ್ದಾರೆ.
ಹಾಲಿ ನ್ಯಾಯಮೂರ್ತಿ ಟಿ.ಎಸ್.ಠಾಕೂರ್ ಮುಂದಿನ ವರ್ಷದ ಜನವರಿ 4ರಂದು ನಿವೃತ್ತರಾಗಲಿದ್ದಾರೆ. ಅವರ ಉತ್ತರಾಧಿಕಾರಿಯಾಗಿ ಜೆ.ಎಸ್. ಖೇಹರ್ ನೇಮಕಗೊಂಡಿದ್ದಾರೆ.
ನ್ಯಾಯಮೂರ್ತಿ ಖೇಹರ್ ಆ.8, 2010ರಿಂದ ಸೆ.12, 2011ರ ತನಕ ಕರ್ನಾಟಕ ಹೈಕೋರ್ಟ್‌ನಲ್ಲಿ ಮುಖ್ಯ ನ್ಯಾಯಮೂರ್ತಿಯಾಗಿದ್ದರು. 2011ರಲ್ಲಿ ಸುಪ್ರೀಂ ಕೋರ್ಟ್‌ಗೆ ನ್ಯಾಯಮೂರ್ತಿಯಾಗಿ ಪದೋನ್ನತಿ ಹೊಂದಿದ್ದರು.ಇದಕ್ಕೂ ಮೊದಲು ಅವರು ನ.29, 2009ರಿಂದ ಆ.7, 2010ರ ತನಕ ಉತ್ತರಾಖಂಡ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು.ನ್ಯಾಯಮೂರ್ತಿ ಖೇಹರ್ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹುದ್ದೆಗೇರಿದ ಮೊದಲ ಸಿಖ್.