×
Ad

ಪುತ್ತೂರು ನಗರಸಭಾ ಸದಸ್ಯ ಅಬ್ದುಲ್ ಹಮೀದ್ ನಿಧನ

Update: 2016-12-08 10:18 IST

ಪುತ್ತೂರು, ಡಿ.8:  ಪುತ್ತೂರು ನಗರಸಭೆಯ ನಾಮ ನಿರ್ದೇಶಿತ ಸದಸ್ಯ ಆರ್ಯಾಪು ಗ್ರಾಮದ ಒಳತ್ತಡ್ಕ ಕೊಪ್ಪಳ ನಿವಾಸಿ ದಿ.ಮೂಸೆಕುಂಞಿ ಅವರ ಪುತ್ರ ಅಬ್ದುಲ್ ಹಮೀದ್(54) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ನಿಧನರಾದರು.

ಕಟ್ಟಡ ನಿರ್ಮಾಣ ಗುತ್ತಿಗೆದಾರರಾಗಿದ್ದ ಅವರು ಈ ಹಿಂದೆ 2 ಬಾರಿ ಪುತ್ತೂರು ಪುರಸಭಾ ಸದಸ್ಯರಾಗಿ, ಒಂದು ಬಾರಿ ಆರ್ಯಾಪು ಗ್ರಾಮ ಪಂಚಾಯತ್ ಸದಸ್ಯರಾಗಿ, ಒಳತ್ತಡ್ಕ ಮಸೀದಿಯ ಅಧ್ಯಕ್ಷರಾಗಿ, ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳಲ್ಲಿ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಪುತ್ತೂರು ನಗರಸಭೆಯ ನಾಮನಿರ್ದೇಶಿತ ಸದಸ್ಯರಾಗಿದ್ದರು. ಮೃತರ ಮನೆಗೆ ಅನೇಕ ಮಂದಿ ಧಾರ್ಮಿಕ, ರಾಜಕೀಯ ಮತ್ತು ಸಾಮಾಜಿಕ ಮುಖಂಡರು ಬೇಟಿ ನೀಡಿ ಸಂತಾಪ ವ್ಯಕ್ತಪಡಿಸಿದರು. ಮೃತರು ತಾಯಿ, ಪತ್ನಿ, ಮೂವರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News