×
Ad

ರೈಲಿನಲ್ಲಿ ಅಕ್ರಮ ಮದ್ಯ ವಶ

Update: 2016-12-08 22:10 IST

ಕಾರವಾರ, ಡಿ.8 : ಕೊಂಕಣ ರೈಲು ಮಾರ್ಗದಲ್ಲಿ ಸಂಚರಿಸುವ ಮತ್ಸಗಂಧ ಏಕ್ಸ್‌ಪ್ರೆಸ್ ರೈಲಿನಲ್ಲಿ  ಕಾರವಾರದಲ್ಲಿ ನಡೆಸಿದ ವಿಶೇಷ ತಪಾಸಣೆಯ ಸಂದರ್ಭದಲ್ಲಿ ವಾರಸುದಾರರಿಲ್ಲದೆ ಅಕ್ರಮವಾಗಿ ಸಾಗಿಸಲಾಗುತಿದ್ದ ಮದ್ಯವನ್ನು ವಶಪಡಿಸಿಕೊಳ್ಳಲಾಯಿತು.

ಒಟ್ಟು 531 ಬಾಟಲಿ ಗೋವಾದಲ್ಲಿ ತಯಾರಿಸಲ್ಪಟ್ಟ  82.35 ಲೀ. ಮದ್ಯವನ್ನು  ಜನರಲ್ ಕೋಚ್‌ನಲ್ಲಿ ಸಾಗಿಸಲಾಗುತ್ತಿತ್ತು.

ವಶಪಡಿಸಿಕೊಂಡ ಮದ್ಯದ ಮೌಲ್ಯ 19,000ರೂ.ಗಳೆಂದು ಅಂದಾಜಿಸಲಾಗಿದೆ.

ಮದ್ಯವನ್ನು ಕಾರವಾರದ ಅಬಕಾರಿ ಇಲಾಖೆಗೆ ಹಸ್ತಾಂತರಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News