×
Ad

ಕೆನಡಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ

Update: 2016-12-08 23:04 IST

 ಲಕ್ನೋ, ಡಿ.8: ಹನ್ನೊಂದನೆ ಆವೃತ್ತಿಯ ಎಫ್‌ಐಎಚ್ ಜೂನಿಯರ್ ಹಾಕಿ ವಿಶ್ವಕಪ್ ಟೂರ್ನಿ ಗುರುವಾರ ಇಲ್ಲಿ ಆರಂಭವಾಗಿದ್ದು, ಲೀಗ್‌ನ ಆರಂಭಿಕ ಪಂದ್ಯದಲ್ಲಿ ಆತಿಥೇಯ ಭಾರತ ತಂಡ ಕೆನಡಾ ತಂಡವನ್ನು 4-0 ಗೋಲುಗಳ ಅಂತರದಿಂದ ಮಣಿಸಿ ಶುಭಾರಂಭ ಮಾಡಿದೆ.

ಮೇಜರ್ ಧ್ಯಾನ್‌ಚಂದ್ ಸ್ಟೇಡಿಯಂನ ‘ಡಿ’ ಗುಂಪಿನ ಪಂದ್ಯದಲ್ಲಿ ಭಾರತದ ಪರ 35ನೆ ನಿಮಿಷದಲ್ಲಿ ಮೊದಲ ಗೋಲು ಬಾರಿಸಿದ ಮನ್‌ದೀಪ್ ಸಿಂಗ್ 1-0 ಮುನ್ನಡೆ ಒದಗಿಸಿಕೊಟ್ಟರು. ಭಾರತ ಮೊದಲಾರ್ಧದಲ್ಲಿ 1-0 ಮುನ್ನಡೆಯನ್ನು ಕಾಯ್ದುಕೊಂಡಿತು.

ದ್ವಿತೀಯಾರ್ಧದಲ್ಲಿ ತನ್ನ ಪ್ರಾಬಲ್ಯ ಮುಂದುವರಿಸಿದ ಭಾರತ ಇನ್ನೂ ಮೂರು ಗೋಲುಗಳನ್ನು ಬಾರಿಸಿತು. 46ನೆ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್‌ರನ್ನು ಗೋಲಾಗಿ ಪರಿವರ್ತಿಸಿದ ಹರ್ಮನ್‌ಪ್ರೀತ್ ಸಿಂಗ್ ಭಾರತಕ್ಕೆ 2-0 ಮುನ್ನಡೆ ಒದಗಿಸಿಕೊಟ್ಟರು. ಕ್ರಮವಾಗಿ 60 ಹಾಗೂ 66ನೆ ನಿಮಿಷದಲ್ಲಿ ಗೋಲು ಬಾರಿಸಿದ ವರುಣ್ ಕುಮಾರ್ ಹಾಗೂ ಅಜಿತ್ ಕುಮಾರ್ ಪಾಂಡೆ ಭಾರತಕ್ಕೆ 4-0 ಗೋಲುಗಳ ಅಂತರದಿಂದ ಭರ್ಜರಿ ಗೆಲುವು ತಂದುಕೊಟ್ಟರು.

 ಅತ್ಯುತ್ತಮ ಪ್ರದರ್ಶನ ನೀಡಿದ ಕೆನಡಾದ ಗೋಲ್‌ಕೀಪರ್ ಇಕ್ವಿಂದರ್ ಗಿಲ್ ಭಾರತಕ್ಕೆ ಇನ್ನೂ ಹೆಚ್ಚಿನ ಗೋಲುಗಳನ್ನು ನಿರಾಕರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News