×
Ad

ಜಿಲ್ಲಾ ಆಸ್ಪತ್ರೆಯ ಮಕ್ಕಳ ಆರೈಕೆ ಕೇಂದ್ರ ಪ್ರಾದೇಶಿಕ ಕೇಂದ್ರವಾಗಿ ಮೇಲ್ದರ್ಜೆಗೆ: ಕೆ.ಆರ್.ರಮೇಶ್ ಕುಮಾರ್

Update: 2016-12-09 15:31 IST

ಮಂಗಳೂರು,ಡಿ.9: ದ.ಕ ಜಿಲ್ಲಾ ಆಸ್ಪತ್ರೆಯ ಮಕ್ಕಳ ಆರೈಕೆ ಕೇಂದ್ರವನ್ನು ಪ್ರಾದೇಶಿಕ ಮಕ್ಕಳ ಆರೋಗ್ಯ ಸಂಸ್ಥೆಯಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಆರ್.ರಮೇಶ್ ಕುಮಾರ್ ತಿಳಿಸಿದ್ದಾರೆ.

ನಗರದ ವೆನ್‌ಲಾಕ್ ಆಸ್ಪತ್ರೆ ಗೆ ಭೇಟಿ ನೀಡಿದ ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ  ಸುದ್ದಿಗೊಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು.

ಮುಂದಿನ ಹಂತದಲ್ಲಿ ವೆನ್‌ಲಾಕ್ ಆಸ್ಪತ್ರೆಯನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಅಭಿವೃದ್ಧಿ ಪಡಿಸುವ ಉದ್ದೇಶ ಹೊಂದಿರುವುದಾಗಿ ರಮೇಶ್ ಕುಮಾರ್ ತಿಳಿಸಿದರು.ಮಂಗಳೂರಿನ ಮಕ್ಕಳ ಆರೈಕೆ ಕೇಂದ್ರದಲ್ಲಿ ಬೆಂಗಳೂರಿನ ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಕೇಂದ್ರದ ರೀತಿಯಲ್ಲಿ ವಿಶೇಷ ಸೌಲಭ್ಯವನ್ನು ಹೊಂದಿರುವ ಪ್ರಾದೇಶಿಕ ಕೇಂದ್ರವಾಗಿ ಅಭಿವೃದ್ಧಿ ಪಡಿಸಲು ಮೂರು ಕೋಟಿ ರೂ. ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ ಎಂದು ರಮೇಶ್ ಕುಮಾರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News