×
Ad

ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಾರ್ಹ: ಸಿದ್ದರಾಮಯ್ಯ

Update: 2016-12-09 21:24 IST

ಹೊಸದಿಲ್ಲಿ/ಬೆಂಗಳೂರು, ಡಿ. 9: ಕಾವೇರಿ ನ್ಯಾಯಾಧೀಕರಣದ ಐತೀರ್ಪು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿಯನ್ನು ವಿಚಾರಣೆಗೆ ಯೋಗ್ಯ ಎಂಬ ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಾರ್ಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಶುಕ್ರವಾರ ಹೊಸದಿಲ್ಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರತಿನಿತ್ಯ ತಮಿಳುನಾಡಿಗೆ ಎರಡು ಸಾವಿರ ಕ್ಯೂಸೆಕ್ಸ್ ನೀಡು ಬಿಡಬೇಕೆಂಬ ಆದೇಶವನ್ನು ಮಾರ್ಪಡಿಸಲು ಕೋರ್ಟ್‌ಗೆ ಮನವಿ ಸಲ್ಲಿಸಲಾಗುವುದು ಎಂದು ಇದೇ ವೇಳೆ ತಿಳಿಸಿದರು.

ಈ ಸಂಬಂಧ ರಾಜ್ಯದ ಪರವಾದ ಮಂಡಿಸುತ್ತಿರುವ ಹಿರಿಯ ವಕೀಲ ಫಾಲಿ ನಾರಿಮನ್ ಸೇರಿದಂತೆ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News