×
Ad

ಸಹಕಾರ ಬ್ಯಾಂಕ್‌ಗಳಲ್ಲಿ ರದ್ದಾದ ನೋಟು ಸ್ವೀಕರಿಸುವ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಸರಕಾರಕ್ಕೆ ಸುಪ್ರೀಂ ಸೂಚನೆ

Update: 2016-12-09 21:43 IST

ಹೊಸದಿಲ್ಲಿ, ಡಿ.9: ಜಿಲ್ಲಾ ಸಹಕಾರ ಬ್ಯಾಂಕ್‌ಗಳು ರದ್ದಾದ ಕರೆನ್ಸಿ ನೋಟುಗಳನ್ನು ಮತ್ತು ಕೆಲ ಷರತ್ತುಗಳಿಗೆ ಒಳಪಟ್ಟು ಠೇವಣಿಗಳನ್ನು ಸ್ವೀಕರಿಸುವ ಬಗ್ಗೆ ಪ್ರತ್ರಿಕ್ರಿಯೆ ನೀಡುವಂತೆ ಕೇಂದ್ರ ಸರಕಾಕ್ಕೆ ಸುಪ್ರೀಂಕೋರ್ಟ್ ಸೂಚಿಸಿದೆ.

     ರದ್ದಾದ ಕರೆನ್ಸಿ ನೋಟುಗಳನ್ನು ಸ್ವೀಕರಿಸಲು ಜಿಲ್ಲಾ ಸಹಕಾರ ಬ್ಯಾಂಕ್‌ಗಳ ಮೇಲಿರುವ ನಿರ್ಬಂಧ ಸೇರಿದಂತೆ ಈ ವಿಷಯದ ಬಗ್ಗೆ ಸರಕಾರದ ನಿಲುವನ್ನು ತಿಳಿಸುವಂತೆ ಅಟಾರ್ನಿ ಜನರಲ್ ಮುಕುಲ್ ರೊಹ್ಟಗಿ ಅವರಿಗೆ ಪ್ರಧಾನ ನ್ಯಾಯಾಧೀಶ ಟಿ.ಎಸ್.ಠಾಕುರ್ ನೇತೃತ್ವದ ಪೀಠವೊಂದು ತಿಳಿಸಿದೆ. ಅಲ್ಲದೆ ಹಣ ಹಿಂಪಡೆಯುವ ಮಿತಿಯನ್ನು ನಿಗದಿಗೊಳಿಸಿದ ಬಳಿಕವೂ ಜನರಿಗೆ ಈ ಮೊತ್ತದಷ್ಟು ಹಣ ಯಾಕೆ ಸಿಗುತ್ತಿಲ್ಲ ಎಂದು ಪೀಠವು ಸರಕಾರವನ್ನು ಪ್ರಶ್ನಿಸಿದೆ. ನ್ಯಾಯಾಧೀಶರಾದ ಎ.ಎಂ. ಖಾನ್‌ವಿಳ್ಕರ್ ಮತ್ತು ಡಿ.ವೈ.ಚಂದ್ರಚೂಡ್ ಅವರು ಪೀಠದ ಇತರ ಸದಸ್ಯರಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News