ಉಳ್ಳಾಲ ದರ್ಗಾಕ್ಕೆ ಅಲ್ಪಸಂಖ್ಯಾತ ನಿಗಮದ ಅಧ್ಯಕ್ಷ ಗಫೂರ್ ಭೇಟಿ
Update: 2016-12-09 22:23 IST
ಉಳ್ಳಾಲ, ಡಿ.9: ಉಳ್ಳಾಲ ಸಯ್ಯದ್ ಮದನಿ ದರ್ಗಾಕ್ಕೆ ರಾಜ್ಯ ಅಲ್ಪಸಂಖ್ಯಾತ ನಿಗಮದ ಅಧ್ಯಕ್ಷ ಎಂ.ಎ.ಗಫೂರ್ ಶುಕ್ರವಾರ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಬಳಿಕ ಮಾತನಾಡಿ ಅವರು, ಮುಸ್ಲಿಂ, ಕ್ರೈಸ್ತ, ಜೈನ, ಸಿಖ್, ಬೌದ್ಧ, ಪಾರ್ಷಿ ಮೊದಲಾದ ಸಮುದಾಯ ಅಲ್ಪಸಂಖ್ಯಾತ ವಿಭಾಗಕ್ಕೆ ಸೇರಿದ್ದು ನಿಗಮದಡಿ ಬರುತ್ತದೆ. ಈ ಸಮುದಾಯಕ್ಕೆ ಸರ್ಕಾರದಿಂದ ಸಿಗುವ ಸರ್ವ ಸವಲತ್ತುಗಳನ್ನೂ ದೊರಕಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ದರ್ಗಾ ಅಧ್ಯಕ್ಷ ಅಬ್ದುಲ್ ರಶೀದ್ ಬರಮಾಡಿಕೊಂಡರು.
ಮೇಲಂಗಡಿ ಮೊಹಿಯುದ್ದೀನ್ ಜುಮಾ ಮಸೀದಿ ಅಧ್ಯಕ್ಷ ಫಾರೂಕ್ ಉಳ್ಳಾಲ್, ಅರಬಿಕ್ ಟ್ರಸ್ಟ್ ಕಾರ್ಯದರ್ಶಿ ಆಸಿಫ್ ಅಬ್ದುಲ್ಲಾ, ದರ್ಗಾ ಕಾರ್ಯದರ್ಶಿ ಮಹಮ್ಮದ್ ತ್ವಾಹ, ಸದಸ್ಯ ಅಬ್ದುಲ್ ಲತೀಫ್, ಜಮಾಲ್ ಬಾರ್ಲಿ, ಮುಸ್ತಫಾ ಇಸ್ಮಾಯಿಲ್ ಮಂಚಿಲ, ಸಾಹುಲ್ ತಂಙಳ್ ಮೊದಲಾದವರು ಉಪಸ್ಥಿತರಿದ್ದರು.