ಡಿ.13: ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ಸಹಕಾರಿ ಸಂಸ್ಥೆಗಳ ಸಭೆ
Update: 2016-12-09 23:57 IST
ಮಂಗಳೂರು, ಡಿ.9: ಭಾರತೀಯ ರಿಸರ್ವ್ ಬ್ಯಾಂಕ್‌ನ ಇತ್ತೀಚಿನ ಆದೇಶದನ್ವಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ಸಂಕಷ್ಟಕ್ಕೆ ಸಿಲುಕಿರುವುದನ್ನು ಗಮನಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನೇತೃತ್ವದಲ್ಲಿ ಡಿ.13ರಂದು ಸಹಕಾರಿ ಸಂಸ್ಥೆಗಳ ಅಧ್ಯಕ್ಷರ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯನ್ನು ಕರೆಯಲಾಗಿದೆ.
13ರಂದು ಮೀಲಾದುನ್ನಬಿ ಪ್ರಯುಕ್ತ ಸರಕಾರಿ ರಜೆ ಘೋಷಣೆಯಾಗಿದ್ದರೂ ನಿಗದಿಯಾದಂತೆ ಎಸ್‌ಸಿಡಿಸಿಸಿ ಬ್ಯಾಂಕ್‌ನ ಸಭಾಂಗಣದಲ್ಲಿ ಅಂದು ಬೆಳಗ್ಗೆ 10:30ಕ್ಕೆ ಸಭೆ ನಡೆಯಲಿದೆ. ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟನೆ ತಿಳಿಸಿದೆ.