×
Ad

ಕಡಿದಾಳು ಪ್ರಕಾಶ್‌ಗೆ ವಿಶ್ವಮಾನವ ಪ್ರಶಸ್ತಿ

Update: 2016-12-10 22:47 IST

ತೀರ್ಥಹಳ್ಳಿ, ಡಿ.10: ಮೈಸೂರಿನ ದೇಜಗೌ ಟ್ರಸ್ಟ್‌ನ ವತಿಯಿಂದ ನೀಡಲಾಗುವ 2016ನೆ ಸಾಲಿನ ವಿಶ್ವ ಮಾನವ ಪ್ರಶಸ್ತಿಗೆ ತೀರ್ಥಹಳ್ಳಿ ತಾಲೂಕಿನ ಪ್ರತಿಷ್ಠಿತ ಕುಪ್ಪಳ್ಳಿಯ ಕುವೆಂಪು ಪ್ರತಿಷ್ಠಾನದ ಸಮಕಾರ್ಯದರ್ಶಿ ಕಡಿದಾಳು ಪ್ರಕಾಶ್ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ಮೈಸೂರಿನಲ್ಲಿ ನಡೆದ ದೇಜಗೌ ಟ್ರಸ್ಟ್‌ನ ಸಭೆಯಲ್ಲಿ ಇವರನ್ನು ಆಯ್ಕೆ ಮಾಡಲಾಗಿದೆ. ಮೈಸೂರಿನಲ್ಲಿ ಡಿಸೆಂಬರ್ 30ರಂದು ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕುವೆಂಪು ಪ್ರತಿಷ್ಠಾನದ ಸಮಕಾರ್ಯದರ್ಶಿ ಕಡಿದಾಳು ಪ್ರಕಾಶ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News